SHIMOGA, 10 AUGUST 2024 : ದಕ್ಷಿಣ ಕರ್ನಾಟಕ ಮಹಿಳಾ ನ್ಯಾಯವಾದಿಗಳ (Women Advocates) ಸಮ್ಮೇಳನಕ್ಕೆ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಚಾಲನೆ ನೀಡಿದರು. ಸರ್ಕಾರಿ ನೌಕರರ ಭವನದಲ್ಲಿ ನಡೆದ ಸಮ್ಮೇಳನದಲ್ಲಿ ವಿವಿಧ ಜಿಲ್ಲೆಗಳ ಮಹಿಳಾ ನ್ಯಾಯವಾದಿಗಳು ಭಾಗವಹಿಸಿದ್ದರು.
ಯಾರೆಲ್ಲ ಏನೇನು ಹೇಳಿದರು?
ನ್ಯಾ. ಬಿ.ಎಂ.ಶ್ಯಾಮ್ ಪ್ರಸಾದ್, ಹೈಕೋರ್ಟ್ ನ್ಯಾಯಧೀಶರು
ಪುರುಷನೊಬ್ಬ ವಕೀಲನಾಗಿ ಯಶಸ್ವಿಯಾಗಲು ಕುಟುಂಬದ ಸಹಕಾರ ಬೇಕು. ವಕೀಲಿ ವೃತ್ತಿಯಲ್ಲಿ ಮಹಿಳೆ ಯಶಸ್ವಿಯಾಗಲು ಕುಟುಂಬದ ಜೊತೆಗೆ ಸಮಾಜದ ಸಹಕಾರ ಅವಶ್ಯಕ. ಕುಟುಂಬ ಮತ್ತು ವೃತ್ತಿಯನ್ನು ಸಮತೋಲನದಿಂದ ನಿರ್ವಹಿಸಬೇಕಾಗುತ್ತದೆ. ಎರಡರ ಕುರಿತು ಗಂಭೀರವಾಗಿ ಯೋಚಿಸಿ ನಿರ್ಧಾರ ಮಾಡಬೇಕಾಗುತ್ತದೆ.
ನ್ಯಾ. ಉಮಾ, ಹೈಕೋರ್ಟ್ ನ್ಯಾಯಾಧೀಶರು
ಪ್ರತಿ ಕ್ಷೇತ್ರದಲ್ಲಿಯು ಮಹಿಳೆ ತನ್ನ ಛಾಪು ಮೂಡಿಸಿದ್ದಾಳೆ. ಮಹಿಳೆಯರಲ್ಲಿರುವ ಹೋರಾಟದ ಮನೋಭವದ ಕಾರಣ ಆಕೆ ಎಲ್ಲವನ್ನು ಸವಾಲಾಗಿ ಸ್ವೀಕರಿಸುತ್ತಾಳೆ. ಮಹಿಳೆಯರ ಸಾಧನೆಗೆ ಕುಟುಂಬದ ಬೆಂಬಲ ಅಗತ್ಯ.
![]() |
ಮಹಿಳಾ ನ್ಯಾಯವಾದಿಗಳ ಸಮ್ಮೇಳನ ಸಮಿತಿ ಜಿಲ್ಲಾಧ್ಯಕ್ಷೆ ಸರೋಜಾ ಚಂಗೊಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಖಿಲ ಭಾರತ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಅನೀಶ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಜಿ.ಆರ್.ರಾಘವೇಂದ್ರ ಸ್ವಾಮಿ, ರಾಜ್ಯ ಮಹಿಳಾ ನ್ಯಾಯವಾದಿಗಳ ಒಕ್ಕೂಟದ ಅಧ್ಯಕ್ಷೆ ಸಂಧ್ಯಾ ಬಸವರೆಡ್ಡಿ ಮದಿನೂರು, ಕಾರ್ಯದರ್ಶಿ ಹೆಚ್.ಎಂ.ರೇಣುಕಮ್ಮ ಸೇರಿದಂತೆ ಹಲವರು ಇದ್ದರು. ಉದ್ಘಾಟನೆ ಬಳಿಕ ವಿಚಾರ ಸಂಕಿರಣಗಳು ನಡೆದವು.
ಇದಕ್ಕೂ ಮೊದಲು ಆರ್‌ಟಿಒ ರಸ್ತೆಯಲ್ಲಿ ಹೈಕೋರ್ಟ್ ನ್ಯಾಯಾಧೀಶರಿಗೆ ಪೂರ್ಣ ಕುಂಭದ ಸ್ವಾಗತ ನೀಡಲಾಯಿತು. ಗಣ್ಯರನ್ನು ಮೆರವಣಿಗೆ ಮೂಲಕ ಸಮ್ಮೇಳನ ಸಭಾಂಗಣಕ್ಕೆ ಕರೆತರಲಾಯಿತು.
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಕಾರ್ಪೊರೇಟ್ ಕಂಪನಿಗಳ ಪ್ರತಿಕೃತಿಗೆ ಬೆಂಕಿ ಹಚ್ಚಿ ಆಕ್ರೋಶ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200