ಶಿವಮೊಗ್ಗ ಕ್ಷೇತ್ರದಲ್ಲಿ ಮಹಿಳೆಯರಿಂದಲೇ ಹೆಚ್ಚು ಮತದಾನ, ಹೊರಬಿತ್ತು ಕಂಪ್ಲೀಟ್‌ ವರದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 MAY 2024

ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ದಾಖಲೆ ಪ್ರಮಾಣದ ಮತದಾನವಾಗಿದೆ. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.

ಶಿವಮೊಗ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 17,52,885 ಮತದಾರರು ಹಕ್ಕು ಚಲಾಯಿಸಲು ಅರ್ಹರಿದ್ದರು. ಈ ಪೈಕಿ 13,72,949 ಮಂದಿ ಮಾತ್ರ ಮತದಾನ ಮಾಡಿದ್ದಾರೆ. ಶೇ.78.33 ರಷ್ಟು ಮತದಾನವಾಗಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಇಷ್ಟೊಂದು ಪ್ರಮಾಣದ ಮತದಾನವಾಗಿರುವುದು ಇದೇ ಮೊದಲು.

ಮಹಿಳಾ ಮತದಾರರೆ ಹೆಚ್ಚು

ಈ ಬಾರಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಒಟ್ಟು 8,90,061 ಮಹಿಳಾ ಮತದಾರರ ಪೈಕಿ 6,92,402 ಮಹಿಳೆಯರು ಮತ ಚಲಾಯಿಸಿದ್ದಾರೆ. ಒಟ್ಟು ಪುರುಷ ಮತದಾರರ ಸಂಖ್ಯೆ 8,62,789. ಮತ ಚಲಾಯಿಸಿದವರು 6,80,534 ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ. 35 ತೃತೀಯ ಲಿಂಗಿ ಮತದಾರರ ಪೈಕಿ 13 ಮಂದಿ ಹಕ್ಕು ಚಲಾಯಿಸಿದ್ದಾರೆ.

ಯಾವ್ಯಾವ ಕ್ಷೇತ್ರದಲ್ಲಿ ಹೇಗಿತ್ತು?

ಕ್ಷೇತ್ರಪುರುಷಮಹಿಳೆ
ಶಿವಮೊಗ್ಗ ಗ್ರಾ.9217290683
ಭದ್ರಾವತಿ7639579484
ಶಿವಮೊಗ್ಗ9514797134
ತೀರ್ಥಹಳ್ಳಿ7818179075
ಶಿಕಾರಿಪುರ8574882862
ಸೊರಬ8314580583
ಸಾಗರ8439384180
ಬೈಂದೂರು8535398401

ಇದನ್ನೂ ಓದಿ – ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಷ್ಟೊತ್ತಿಗೆ? ಯಾವ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment