ಶಿವಮೊಗ್ಗದಲ್ಲಿ ಮಳೆಯೋ ಮಳೆ, ಹಳದಿ ಅಲರ್ಟ್ ಘೋಷಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ಶಿವಮೊಗ್ಗ | ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದೆ. ಶಿವಮೊಗ್ಗ ಸೇರಿದಂತೆ ಐದು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (YELLOW ALERT) ಘೋಷಣೆ ಮಾಡಲಾಗಿದೆ. ಇವತ್ತು ರಾತ್ರಿಯು ಭಾರಿ ಮಳೆ ಸುರಿಯುವ ಸಂಭವವಿದೆ.

Shimoga Nanjappa Hospital

ಜಿಲ್ಲೆಯಾದ್ಯಂತ ಇವತ್ತೂ ಭಾರಿ ಮಳೆಯಾಗುತ್ತಿದೆ. ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಶಿವಮೊಗ್ಗ ನಗರದಲ್ಲಿ ಬೆಳಗ್ಗೆಯಿಂದ ಕೆಲವು ಹೊತ್ತು ಬಿಡುವು ನೀಡುತ್ತಿರುವ ಮಳೆ, ನಂತರ ಅಬ್ಬರಿಸುತ್ತಿದೆ.

ಮಲೆನಾಡು ಭಾಗದಲ್ಲಿ ಹೆಚ್ಚು ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಮಳೆ ಸುರಿಯುತ್ತಿದೆ. ಕಳೆದ 24 ಗಂಟೆಯಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದೆ. ಕರಾವಳಿ ಭಾಗದಲ್ಲಿ ವಾಡಿಕೆ ಮಳೆ 32 ಮಿ.ಮೀ. ಆದರೆ 48 ಮಿ.ಮೀ ಮಳೆಯಾಗಿದೆ. ಇನ್ನು, ಮಲೆನಾಡು ಭಾಗದಲ್ಲಿ ವಾಡಿಕೆ ಮಳೆ 17 ಮಿ.ಮೀ. ಆದರೆ 41 ಮಿ.ಮೀ ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಅಬ್ಬರ

ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಜೋರು ಮಳೆ ಸುರಿದಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 22 ಮಿ.ಮೀ. ಆದರೆ 37 ಮಿ.ಮೀ ಮಳೆ ಸುರಿದಿದೆ. ಆಗುಂಬೆ ಸಮೀಪದ ಹೊನ್ನೇತಾಳು ಗ್ರಾಮದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹೊನ್ನೇತಾಳು ಗ್ರಾಮದಲ್ಲಿ 133 ಮಿ.ಮೀ ಮಳೆ ಸುರಿದಿದೆ.

ಯಾವ್ಯಾವ ತಾಲೂಕಲ್ಲಿ ಎಷ್ಟು ಮಳೆ

ಜಿಲ್ಲೆಯ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಹೊಸನಗರ ತಾಲೂಕಿನಲ್ಲಿ 72 ಮಿ.ಮೀ, ತೀರ್ಥಹಳ್ಳಿಯಲ್ಲಿ 67.4 ಮಿ.ಮೀ, ಸಾಗರದಲ್ಲಿ 63.6 ಮಿ.ಮೀ ಮಳೆಯಾಗಿದೆ. ಇನ್ನು, ಭದ್ರಾವತಿಯಲ್ಲಿ 16.9 ಮಿ.ಮೀ, ಶಿಕಾರಿಪುರದಲ್ಲಿ 21.7 ಮಿ.ಮೀ, ಶಿವಮೊಗ್ಗದಲ್ಲಿ 21 ಮಿ.ಮೀ, ಸೊರಬದಲ್ಲಿ 40 ಮಿ.ಮೀ ಮಳೆಯಾಗಿದೆ.

ಹಳದಿ ಅಲರ್ಟ್ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇವತ್ತು ಮಧ್ಯಾಹ್ನ 1 ಗಂಟೆಯಿಂದ ಆ.9ರ ಬೆಳಗ್ಗೆ 8.30ರವರೆಗೆ ಯಲ್ಲೋ ಅಲರ್ಟ್ ಇರಲಿದೆ. ಈ ಅವಧಿಯಲ್ಲಿ ಜಿಲ್ಲೆಯಲ್ಲಿ 64.5 ಮಿ.ಮೀ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ.

ಇದನ್ನೂ ಓದಿ – ಅಡಕೆ ಧಾರಣೆ | 8 ಆಗಸ್ಟ್ 2022 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ಧಾರಣೆ

ADVERTISEMENT 

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment