ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ನವೆಂಬರ್ 2021
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ವಿವಿಧೆಡೆ ನಾಲ್ಕು ದಿನ ನಿರಂತರ ಮಳೆಯಾಗಲಿದೆ. ನ.5ರವರೆಗೆ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲದೆ ಶಿವಮೊಗ್ಗ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನ.2 ರಿಂದ ನ.5ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಮಳೆಯಾಗಲಿದೆ. ಆದ್ದರಿಂದ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.