ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲೆಯಾದ್ಯಂತ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ. ವಿವಿಧೆಡೆ ಇವತ್ತು ಇಡೀ ದಿನ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಆದ್ದರಿಂದ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಯಲ್ಲೋ ಅಲರ್ಟ್ (Yellow Alert) ಘೋಷಿಸಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಶಿವಮೊಗ್ಗ ಜಿಲ್ಲೆಯಲ್ಲಿ ಗುಡುಗು, ಮಿಂಚು, ಜೋರು ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಿಗು ಯಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ.
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಾದ್ಯಂತ ಗುಡುಗು, ಮಳೆ, ಎಲ್ಲೆಲ್ಲಿ ಮಳೆಯಾಗುತ್ತಿದೆ?

