ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 25 ಜುಲೈ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭಾರಿ ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ರಸ್ತೆಗಳು ಕೊಚ್ಚಿ ಹೋಗಿವೆ. ಬೆಳೆಹಾನಿ ಸಂಭವಿಸಿದೆ. ಆಸ್ತಿಪಾಸ್ತಿಗೂ ಹಾನಿಯಾಗಿದೆ. ಈ ನಡುವೆ ಹಲವು ಗ್ರಾಮಗಳು ಹೊರ ಜಗತ್ತಿನೊಂದಿಗೆ ಸಂಪರ್ಕ ಕಳೆದುಕೊಂಡು, ಕತ್ತಲಲ್ಲಿ ಕೂರುವಂತಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪುಷ್ಯಾ ಮಳೆಯ ಅಬ್ಬರಕ್ಕೆ ಶಿವಮೊಗ್ಗ ಜಿಲ್ಲೆ ತತ್ತರಿಸಿ ಹೋಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲಲ್ಲಿ ಮರಗಳು ಉರುಳಿವೆ. ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳೆ ಕಣ್ಮರೆಯಾಗಿವೆ. ಈ ನಡುವೆ ಜನರು ಕತ್ತಲಲ್ಲಿ ಕೂರುವಂತಾಗಿದೆ.
ಕತ್ತಲಲ್ಲೇ ಕಾಲ ಕಳೆಯಬೇಕಾಯ್ತು
ಮಳೆ ಅಬ್ಬರಿಸುತ್ತಿದ್ದಂತೆ ಗ್ರಾಮಗಳಲ್ಲಿ ವಿದ್ಯುತ್ ಕೈಕೊಟ್ಟಿದೆ. ಕೆಲವು ಕಡೆ ಎರಡು ದಿನದಿಂದಲೂ ವಿದ್ಯುತ್ ಇಲ್ಲವಾಗಿದೆ. ‘ತೀರ್ಥಹಳ್ಳಿ ಪಟ್ಟಣಕ್ಕೆ ಹತ್ತಿರವಿದ್ದರೂ ನಮ್ಮ ಮನೆಗಳಿರುವ ಕಡೆ ವಿದ್ಯುತ್ ವ್ಯತ್ಯವಾಗಿದೆ. ಎರಡು ದಿನದಿಂದ ವಿದ್ಯುತ್ ಇಲ್ಲ. ಮೊಬೈಲ್ಗಳು ಚಾರ್ಜ್ ಮಾಡಿಕೊಳ್ಳಲು ಅಸಾಧ್ಯವಾಗಿದೆ’ ಅನ್ನುತ್ತಾರೆ ಭರತ್.
ತೀರ್ಥಹಳ್ಳಿ, ಸಾಗರ, ಹೊಸನಗರದ ಹಳ್ಳಿಗಳಲ್ಲಿ ವಿದ್ಯುತ್ ಸಮಸ್ಯೆ ದೊಡ್ಡದಾಗಿ ಕಾಡುತ್ತಿದೆ. ‘ಪರೀಕ್ಷೆಗಳಿವೆ ಓದಲಿಕ್ಕೆ ಕಷ್ಟವಾಗಿದೆ. ಚಿಮಣಿ ಅಡಿಯಲ್ಲಿ ಓದಬೇಕಾಗಿದೆ’ ಎಂದು ಅಳಲು ತೋಡಿಕೊಳ್ಳುತ್ತಾರೆ ಹೊಸನಗರದ ಚೈತ್ರಾ.
ಒಂದು ಪಾಯಿಂಟ್ ನೆಟ್ವರ್ಕು ಮಾಯ
ಈಗಾಗಲೆ ನೆಟ್ವರ್ಕ್ ಸಮಸ್ಯೆಯಿಂದ ವರ್ಕ್ ಫ್ರಂ ಹೋಂ, ಆನ್ಲೈನ್ ಕ್ಲಾಸ್ಗಳಿಂದ ಮಲೆನಾಡಿನ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ. ಇದರ ನಡುವೆ ಮಳೆಯಿಂದಾಗಿ ಇದ್ದ ಒಂದು ಪಾಯಿಂಟ್ ನೆಟ್ವಕ್ ಕೂಡ ಮಾಯವಾಗಿದೆ. ತುರ್ತು ಸಂದರ್ಭದಲ್ಲಿ ಹೊರ ಜಗತ್ತಿನೊಂದಿಗೆ ಸಂಪರ್ಕಕ್ಕೆ ಇದ್ದ ಏಕೈಕ ಸಾಧನವು ಇದ್ದೂ ಇಲ್ಲದಂತಾಗಿದೆ.
ಭಾರಿ ಮಳೆ, ವಿದ್ಯುತ್ ಕಣ್ಣಾಮುಚ್ಚಾಲೆ, ಕೈಕೊಟ್ಟ ನೆಟ್ವರ್ಕ್ನಿಂದ ಜಿಲ್ಲೆಯ ಜನರು ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200