ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಆಗಸ್ಟ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯ ಬೆನ್ನಿಗೆ ಕಾಶಿ ಮತ್ತು ಮಥುರಾದಲ್ಲಿ ಮಂದಿರ ನಿರ್ಮಿಸಬೇಕಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಹಿನ್ನೆಯಲ್ಲಿ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಮುಂದಿನ ದಿನಗಳಲ್ಲಿ ಕಾಶಿ ಹಾಗೂ ಮಥುರಾದಲ್ಲಿ ಕೂಡ ಮಸೀದಿಗಳು ದ್ವಂಸವಾಗಿ ಅಲ್ಲಿಯು ಭವ್ಯ ಮಂದಿರಗಳು ನಿರ್ಮಾಣ ಆಗುತ್ತವೆ ಎಂದರು.
ಅಯೋಧ್ಯೆ, ಕಾಶಿ,ಮಥುರ ಈ ಮೂರು ನಮ್ಮ ಶ್ರದ್ಧಾ ಕೇಂದ್ರಗಳು. ಇದರಲ್ಲಿ ಒಂದು ರೀತಿಯ ಗುಲಾಮಗಿರಿಯ ಸಂಕೇತವಾಗಿ ಮಸೀದಿಗಳು ಇನ್ನೂ ಇವೆ. ಹಾಗಾಗಿ ಮುಂದಿನ ದಿನಗಳಲ್ಲಿ ಆ ಮಸೀದಿಗಳು ದ್ವಂಸವಾಗಿ ಅಲ್ಲಿಯು ಭವ್ಯ ಮಂದಿರಗಳು ನಿರ್ಮಾಣವಾಗಲಿವೆ ಎಂದರು.
ಅಯೋಧ್ಯೆಯ ಹೋರಾಟದಲ್ಲಿ ನಾನು ಭಾಗವಹಿಸಿದ್ದೆ. ಲಾಠಿ ಎಟಿನ ಹೊಡೆತ ತಿಂದರೂ ಮಂದಿರ ಅಲ್ಲೇ ನಿರ್ಮಾಣ ಮಾಡುತ್ತೇವೆ ಎನ್ನುವ ಘೋಷವಾಕ್ಯದಂತೆ ಹಾಗೂ ಅನೇಕ ಜನರ ತ್ಯಾಗ ಬಲಿದಾನದ ಫಲವಾಗಿ ಇವತ್ತು ಅಯೋಧ್ಯೆಯಲ್ಲಿ ಭವ್ಯ ಮಂದಿರ ನಿರ್ಮಾಣವಾಗುತ್ತಿದೆ ಎಂದರು.
ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿಡಿಯೋ ಇಲ್ಲಿದೆ
https://www.facebook.com/liveshivamogga/videos/1605326382977479/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]