ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜುಲೈ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಜಿಲ್ಲೆಯಾದ್ಯಂತ ಲಾಕ್ ಡೌನ್ ತೆರವಾಗಿದೆ. ಆದರೆ ಹಳೆ ಶಿವಮೊಗ್ಗವನ್ನು ಕಂಪ್ಲೀಟ್ ಸೀಲ್ ಡೌನ್ ಮಾಡಲಾಗುತ್ತದೆ. ಜುಲೈ 23ರಿಂದಲೇ ಈ ಭಾಗವನ್ನು ಸೀಲ್ ಡೌನ್ ಮಾಡಲಾಗುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈ ಕುರಿತು ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಕರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡು ಬಂದಿರುವ ಹಳೆ ಶಿವಮೊಗ್ಗ ವ್ಯಾಪ್ತಿಯ ಕೆಲವು ವಾರ್ಡ್ಗಳಲ್ಲಿ ಜುಲೈ 23ರ ಬೆಳಿಗ್ಗೆ 5ರಿಂದ ಜುಲೈ 29ರ ರಾತ್ರಿ 9ಗಂಟೆಯವರೆಗೆ ಸಂಪೂರ್ಣ ಸೀಲ್ಡೌನ್ ಇರಲಿದೆ ಎಂದು ಸ್ಪಷ್ಟಪಡಿಸಿದರು.
ಎಲ್ಲೆಲ್ಲಿ ಸೀಲ್ಡೌನ್ ಮಾಡಲಾಗುತ್ತೆ?
ಹಳೆ ಶಿವಮೊಗ್ಗ ಕ್ಲಸ್ಟರ್ನಲ್ಲಿ ಬರುವ ವಾರ್ಡ್ ಸಂಖ್ಯೆ 22, 23, 29 ಮತ್ತು 30 ವ್ಯಾಪ್ತಿಯಲ್ಲಿ ಸಂಪೂರ್ಣವಾಗಿ ಹಾಗೂ ವಾರ್ಡ್ ಸಂಖ್ಯೆ 12, 13 ಮತ್ತು 33ರಲ್ಲಿನ ಭಾಗಶಃ ವ್ಯಾಪ್ತಿಯಲ್ಲಿ ಸೀಲ್ಡೌನ್ ಜಾರಿಯಾಗಲಿದೆ. ಬೆಕ್ಕಿನ ಕಲ್ಮಠ ಬಿ.ಹೆಚ್.ರಸ್ತೆ, ಅಮೀರ್ ಅಹ್ಮದ್ ವೃತ್ತ, ಅಶೋಕ ವೃತ್ತದಲ್ಲಿನ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ, ಹೊಸ ತೀರ್ಥಹಳ್ಳಿ ರಸ್ತೆ, ಬೈಪಾಸ್ ರಸ್ತೆಯ ತುಂಗಾ ಹೊಸ ಸೇತುವೆವರೆಗೆ ಬರುವಂತಹ ಪ್ರದೇಶದಲ್ಲಿ ಜಾರಿಯಾಗಲಿದೆ.
ಇಲ್ಲಿವೆ 80 ಸಕ್ರಿಯ ಕೋರನ ಕೇಸ್
ಶಿವಮೊಗ್ಗ ನಗರದಲ್ಲಿ ಗುರುತಿಸಲಾಗಿರುವ 27 ಕಂಟೈನ್ಮೆಂಟ್ ಜೋನ್ಗಳು ಈ ವಾರ್ಡ್ಗಳ ವ್ಯಾಪ್ತಿಯಲ್ಲಿದ್ದು 80 ಸಕ್ರಿಯ ಕರೋನಾ ಪಾಸಿಟಿವ್ ಪ್ರಕರಣಗಳು ಇಲ್ಲಿವೆ. ಆದ್ದರಿಂದ ಈ ಪ್ರದೇಶವನ್ನು ಕ್ಲಸ್ಟರ್ ಕಂಟೈನ್ಮೆಂಟ್ ಜೋನ್ ಎಂದು ಗುರುತಿಸಲಾಗಿದೆ. ಈ ಪ್ರದೇಶದಲ್ಲಿನ ಸಾರ್ವಜನಿಕರು ಈ ಪ್ರದೇಶದಿಂದ ಹೊರಗೆ ಹೋಗುವುದನ್ನು ಹಾಗೂ ಬೇರೆ ಪ್ರದೇಶದಲ್ಲಿನ ಸಾರ್ವಜನಿಕರು ಸದರಿ ಪ್ರದೇಶ ಪ್ರವೇಶಿಸುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ವೈದ್ಯಕೀಯ ತುರ್ತು ಚಿಕಿತ್ಸೆ ಪ್ರಕರಣಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಯಾವುದಕ್ಕೆಲ್ಲ ವಿನಾಯಿತಿ ನೀಡಲಾಗುತ್ತೆ?
ಆಸ್ಪತ್ರೆಗಳು, ಔಷಧಿ ಅಂಗಡಿಗಳು ಮತ್ತು ಹಾಲು ಮಾರಾಟ ಕೇಂದ್ರಗಳಿಗೆ ಸಂಪೂರ್ಣ ವಿನಾಯಿತಿ ನೀಡಲಾಗಿದೆ. ತರಕಾರಿ, ದಿನಸಿ, ಮಾಂಸ ಮತ್ತು ಹಣ್ಣು ಮಾರಾಟ ಕೇಂದ್ರಗಳಿಗೆ ಬೆಳಿಗ್ಗೆ 5 ರಿಂದ ಬೆ.10 ರವರೆಗೆ ವಿನಾಯಿತಿ ನೀಡಲಾಗಿದೆ. ಇತರ ಎಲ್ಲಾ ಅಂಗಡಿ ಮುಂಗಟ್ಟುಗಳ ವ್ಯವಹಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೃಷಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಅಂಚೆ ಕಚೇರಿ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.
https://www.facebook.com/liveshivamogga/videos/330329938129750/?t=0
ಯಾವುದಕ್ಕೆಲ್ಲ ನಿಷೇಧ ಇರಲಿದೆ?
ಈ ಭಾಗದಲ್ಲಿ ಬರುವ ಗುಡಿ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳನ್ನು ಸಂಪೂರ್ಣ ಬಂದ್ ಮಾಡಬೇಕು. ಬೀದಿ ಬದಿ ವ್ಯಾಪಾರ, ಸಂತೆ, ಸಭೆ, ಸಮಾರಂಭ ಸಂಪೂರ್ಣ ನಿಷೇಧಿಸಲಾಗಿದೆ. ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಲ್ಲಿ ದೈನಂದಿನ ಪೂಜೆ ಪುನಸ್ಕಾರಗಳನ್ನು ಮಾಡಬಹುದು. ಸಾರ್ವಜನಿಕರಿಗೆ ಪೂಜೆ, ಪ್ರಾರ್ಥನೆ ಮಾಡುವುದಕ್ಕೆ ಹಾಗೂ ಪ್ರವೇಶ ನಿಷೇಧಿಸಲಾಗಿದೆ. ಎಲ್ಲಾ ತರಹದ ನಿರ್ಮಾಣ ಕಾಮಗಾರಿಗಳನ್ನು ನಿಷೇಧಿಸಲಾಗಿದೆ. ಈ ಮಾರ್ಗಸೂಚಿಗಳನ್ನು ಹೊರತುಪಡಿಸಿ ಬೇರೆ ಯಾವುದಾದರೂ ವಿಚಾರಣೆ ಇದ್ದಲ್ಲಿ ಮಹಾನಗರ ಪಾಲಿಕೆಯಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಸಚಿವ ಈಶ್ವರಪ್ಪ ಹೇಳಿದರು.
ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]