ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 28 DECEMBER 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಾಗರ : ಟಿಪ್ಪರ್ ಲಾರಿ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. (death)
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಪ್ರತಿಮಾ (18) ಮೃತ ದುರ್ದೈವಿ (death). ಸಾಗರದ ಸಣ್ಣಮನೆ ಸೇತುವೆ ಬಳಿ ಇಂದು ಬೆಳಗ್ಗೆ ಕಾಲೇಜಿಗೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಪ್ರತಿಮಾಗೆ ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಕರೆದೊಯ್ಯಲಾಗಿತ್ತು.
ಇದನ್ನೂ ಓದಿ – ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಟಿಪ್ಪರ್ ಲಾರಿ ಡಿಕ್ಕಿ, ಒಬ್ಬ ವಿದ್ಯಾರ್ಥಿನಿಗೆ ಗಂಭೀರ ಗಾಯ
ಶಿವಮೊಗ್ಗದಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಬಿಸಿಎಂ ಹಾಸ್ಟೆಲ್ ನ ಮೂರು ವಿದ್ಯಾರ್ಥಿನಿಯರು ಬೆಳಗ್ಗೆ ಒಟ್ಟಿಗೆ ಕಾಲೇಜಿಗೆ ತೆರಳುತ್ತಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಇನ್ನಿಬ್ಬರು ವಿದ್ಯಾರ್ಥಿನಿಯರು ಸಾಗರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.