ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತೀರ್ಥಹಳ್ಳಿ ಸೇರಿದಂತೆ ಜಲಾಶಯದ ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಮತ್ತಷ್ಟು ಹೆಚ್ಚಳವಾದ ಹಿನ್ನೆಲೆಯಲ್ಲಿ, ತುಂಗಾ ಜಲಾಶಯದಿಂದ ಮತ್ತಷ್ಟು ಪ್ರಮಾಣದ ನೀರನ್ನು ಹೊರ ಹರಿಸಲಾಗುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬೆಳಗ್ಗೆ 8 ಗಂಟೆಗೆಯ ವರದಿಯ ಪ್ರಕಾರ ತುಂಗಾ ಜಲಾಶಯದ ಎಲ್ಲಾ ಗೇಟುಗಳಿಂದ ನೀರು ಹೊರ ಹರಿಸಲಾಗುತ್ತಿದೆ. ಜಲಾಶಯದ ಒಳ ಹರಿವು 68,500 ಕ್ಯೂಸೆಕ್ ಇದೆ. ಹೊರ ಹರಿವು 71,000 ಕ್ಯೂಸೆಕ್ ಇದೆ.
ಮೂರು ಗಂಟೆಯಿಂದ ಹೆಚ್ಚಾದ ಹರಿವು
ರಾತ್ರಿ 3 ಗಂಟೆಯಿಂದ ತುಂಗಾ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಮಳೆ ಪ್ರಮಾಣ ಇನ್ನೂ ಹೆಚ್ಚಾಗಿದೆ. ಹಾಗಾಗಿ ಜಲಾಶಯದ ಒಳ ಮತ್ತು ಹೊರ ಹರಿವು ಪ್ರಮಾಣ ಏರಿಕೆಯಾಗುವ ಸಂಭವವಿದೆ. ನಾಲ್ಕರಿಂದ ಐದು ಸಾವಿರ ಕ್ಯೂಸೆಕ್ ನೀರು ಹೆಚ್ಚುವರಿಯಾಗಿ ಹೊರ ಹೋಗುವ ಸಾದ್ಯತೆ ಇದೆ.
ಭೀತಿಯಲ್ಲಿ ಹಳೆ ಶಿವಮೊಗ್ಗ
ಇತ್ತ ತುಂಗಾ ಜಲಾಶಯದ ಹೊರ ಹರಿವು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಹಳೆ ಶಿವಮೊಗ್ಗದಲ್ಲಿ ಮುಳುಗಡೆ ಭೀತಿ ಸೃಷ್ಟಿಯಾಗಿದೆ. ಕಳೆದ ವರ್ಷ ಈ ಹೊತ್ತಿಗಾಗಲೇ ಹಳೆ ಶಿವಮೊಗ್ಗದ ವಿವಿಧೆಡೆ ಜಲಾವೃತವಾಗಿದ್ದವು. ಕಳೆದ ವರ್ಷ ಈ ದಿನ ತುಂಗಾ ಜಲಾಶಯದಿಂದ 80,605 ಕ್ಯೂಸೆಕ್ ನೀರನ್ನ ಹೊರ ಬಿಡಲಾಗಿತ್ತು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]