ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | HOSANAGARA / RIPPONPETE NEWS | 22 MAY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮದುವೆ ಬಳಿಕ ನಡೆದ ಬಾಡೂಟ ಕಾರ್ಯಕ್ರಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಬ್ಬರ ಅಮಾನತಿಗೆ ಕಾರಣವಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಕಾರ್ಯಕ್ರಮ ನಡೆದರೂ ತಡೆಯುವಲ್ಲಿ ವಿಫಲವಾದ ಆರೋಪದ ಮೇಲೆ ಪಿಡಿಒ ಅವರನ್ನು ಅಮಾನತುಪಡಿಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ರಿಪ್ಪನ್ ಪೇಟೆ ಸಮೀಪದ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಾಡೂಟ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮಸ್ಥರೊಬ್ಬರು ಮಾಹಿತಿ ನೀಡಿದ ಹಿನ್ನೆಲೆ ಪಿಡಿಒ ಹೆಚ್.ರಾಘವೇಂದ್ರ ಅವರು ಸಿಬ್ಬಂದಿಯೊಬ್ಬರನ್ನು ಕಳುಹಿಸಿ, ಪರಿಶೀಲನೆ ನಡೆಸಿದ್ದರು. ಕೋವಿಡ್ ಲಾಕ್ ಡೌನ್ ಜಾರಿಯಲ್ಲಿರುವುದರಿಂದ, ಪಿಡಿಒ ಅನುಮತಿ ಇಲ್ಲದೆ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.
ಅನುಮತಿ ಇಲ್ಲದೆ ಬಾಡೂಟ ಕಾರ್ಯಕ್ರಮ ಮಾಡಿದ್ದರ ಸಂಬಂಧ ರಿಪ್ಪನ್ ಪೇಟೆ ಠಾಣೆಯಲ್ಲಿ ಪಿಡಿಒ ರಾಘವೇಂದ್ರ ದೂರು ನೀಡಿದ್ದರು.
ಹೊರಬಿತ್ತು ಅಮಾನತು ಆದೇಶ
ಕಾರ್ಯಕ್ರಮವನ್ನು ತಡೆಯುವಲ್ಲಿ ವಿಫಲವಾದ ಹಿನ್ನೆಲೆ ಪಿಡಿಒ ರಾಘವೇಂದ್ರ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಅಮಾನತು ಮಾಡಿದ್ದಾರೆ. ಈ ಸಂಬಂಧ ಆದೇಶವನ್ನು ಹೊರಡಿಸಿದ್ದಾರೆ.
ಸಾಮೂಹಿಕ ರಾಜೀನಾಮೆ ಬೆದರಿಕೆ
ಈ ನಡುವೆ ಪಿಡಿಒ ರಾಘವೇಂದ್ರ ಅವರನ್ನು ಅಮಾನತು ಮಾಡಿರುವುದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಹೊಸನಗರ ಘಟಕ ತೀವ್ರವಾಗಿ ವಿರೋಧಿಸಿದೆ. ರಾಘವೇಂದ್ರ ಅವರ ಅಮಾನತು ಅದೇಶ ಹಿಂಪಡೆಯದೆ ಇದ್ದರೆ ಸಾಮೂಹಿಕ ರಾಜೀನಾಮೆ ನೀಡುವ ಬೆದರಿಕೆ ಒಡಿದ್ದಾರೆ. ಈ ಸಂಬಂಧ ಹೊಸನಗರ ಇಒ ಮೂಲಕ ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಹೊಸನಗರ ತಾಲೂಕಿನಲ್ಲಿ 30 ಗ್ರಾಮ ಪಂಚಾಯಿತಿಗಳಿವೆ. 19 ಪಿಡಿಒಗಳು ಮಾತ್ರ ಇದ್ದಾರೆ. ಒತ್ತಡದ ನಡುವೆ ಕೆಲಸ ಮಾಡುತ್ತಿದ್ದೇವೆ. ಕರೋನದಂತಹ ತುರ್ತು ಸಂದರ್ಭದಲ್ಲಿ ಪಿಡಿಒಗಳಲ್ಲಿ ಸ್ಥೈರ್ಯ ತುಂಬಬೇಕಿದ್ದ ಸಿಇಒ ಅವರು ಅಮಾನತು ಶಿಕ್ಷೆ ನೀಡುತ್ತಿರುವುದು ಸರಿಯಲ್ಲ ಎಂದು ಒಕ್ಕೂಟದ ಪ್ರಮುಖರು ಆರೋಪಿಸಿದ್ದಾರೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]