SHIVAMOGGA LIVE NEWS | SHIMOGA | 11 ಜುಲೈ 2022
ಖಾಸಗಿ ಬಸ್ ನಿಲ್ದಾಣದ (BUS STAND) ಬಳಿ ಸುಸ್ತಾದಂತೆ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ (Mc GANN HOSPITAL) ದಾಖಲು ಮಾಡಿದ್ದಾರೆ. ಪರಿಶೀಲನೆ ನಡೆಸಿದ ವೈದ್ಯರು ವ್ಯಕ್ತಿ ಮೃತಪಟ್ಟಿರುವುದಾಗಿ (DEATH) ಘೋಷಿಸಿದ್ದಾರೆ.
ಜುಲೈ 9ರಂದು ಶಿವಮೊಗ್ಗದ ನಗರದ ಖಾಸಗಿ ಬಸ್ ನಿಲ್ದಾಣದ ವ್ಯಕ್ತಿಯೊಬ್ಬರು ಸುಸ್ತಾಗಿ ಬಿದ್ದಿದ್ದರು. ಅಂದಾಜು 40 ರಿಂದ 45 ವರ್ಷ ವಯಸ್ಸಾಗಿದೆ. ಮೃತ ವ್ಯಕ್ತಿಯು ಸುಮಾರು 5.8 ಅಡಿ ಎತ್ತರ, ಕಪ್ಪು ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ.
ತಲೆಯಲ್ಲಿ 2 ಇಂಚು ಉದ್ದದ ಕಪ್ಪು ಕೂದಲು, ಅರ್ಧ ಇಂಚು ಉದ್ದದ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಮೈಮೇಲೆ ಹಸಿರು ಬಣ್ಣದ ಅರ್ಧ ತೋಳಿನ ಟೀ-ಶರ್ಟ್, ಮಾಸಲು ಬಣ್ಣದ ಚಡ್ಡಿ ಧರಿಸಿದ್ದು ಮೃತನ ಬಲಗೈನಲ್ಲಿ ‘ಶ್ರೀ ಮಾರುತಿ’ ಎಂಬ ಹೆಸರಿನ ಹಚ್ಚೆ ಗುರುತು ಇರುತ್ತದೆ. ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ – ಬಸ್ ನಿಲ್ದಾಣದ ಬಳಿ ಅನುಮಾನಾಸ್ಪದ ವರ್ತನೆ, ಮೆಡಿಕಲ್ ಟೆಸ್ಟ್ ಬಳಿಕ ಇಬ್ಬರು ಅರೆಸ್ಟ್
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.