ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 DECEMBER 2023
SHIMOGA : ನಗರದ ಲಾಡ್ಜ್ ಒಂದರ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದರು. ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ರೂಂ ಪಡೆದಿರುವ ವಿಚಾರ ತಿಳಿದು ಪೊಲೀಸರು ತಪಾಸಣೆ ಕೈಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಕೆ.ಆರ್.ಪುರಂ ರಸ್ತೆಯಲ್ಲಿರುವ ಲಾಡ್ಜ್ ಒಂದರ ಮೇಲೆ ದಾಳಿ ನಡೆಸಲಾಗಿದೆ. ಅನೈತಿಕ ಚಟುವಟಿಕೆ ಸಂಬಂಧ ಸ್ಥಳೀಯರ ಆರೋಪದ ಹಿನ್ನೆಲೆ ತಪಾಸಣೆ ನಡೆಸಲಾಗುತ್ತಿದೆ. ಪೊಲೀಸರು ಪರಿಶೀಲನೆ ನಡೆಸುತ್ತಿರುವ ಹಿನ್ನೆಲೆ ಸಾರ್ವಜನಿಕರಿಗೆ ಲಾಡ್ಜ್ ಪ್ರವೇಶ ನಿರ್ಬಂಧಿಸಲಾಗಿತ್ತು.
ಡಿವೈಎಸ್ಪಿ ಬಾಲರಾಜ್ ಅವರ ನೇತೃತ್ವದಲ್ಲಿ ದೊಡ್ಡಪೇಟೆ ಠಾಣೆ ಇನ್ಸ್ಪೆಕ್ಟರ್ ರವಿ ಸಂಗನಗೌಡ ಪಾಟೀಲ್ ಮತ್ತು ಸಿಬ್ಬಂದಿ ಪರಿಶೀಲಿಸಿದರು.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆಗೆ ಇವತ್ತು ಹುಟ್ಟುಹಬ್ಬ, ಕೇಕ್ ಕತ್ತರಿಸಿ ಮಕ್ಕಳಿಂದ ‘ನಿಲ್ದಾಣ ಮಹೋತ್ಸವ’
ಶಿವಮೊಗ್ಗ ಲೈವ್.ಕಾಂ