ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 14 DECEMBER 2022
ಶಿವಮೊಗ್ಗ : ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡಲು 45 ಜನರನ್ನು ಗಡಿಪಾರು (deport) ಮಾಡುವಂತೆ ಪೊಲೀಸ್ ಇಲಾಖೆ ಪ್ರಸ್ತಾವನೆ ಸಲ್ಲಿಸಿದೆ. ಉಪ ವಿಭಾಗಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈಗಾಗಲೆ ಮೂವರನ್ನು ಗಡಿಪಾರು ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
2022ರ ಜನವರಿ 1 ರಿಂದ ಈವರೆಗೆ 45 ಮಂದಿ ಗಡಿಪಾರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಪೈಕಿ ಶಿವಮೊಗ್ಗ ಉಪ ವಿಭಾಗದಿಂದ 31 ಮಂದಿ, ಭದ್ರಾವತಿ ಮತ್ತು ಸಾಗರ ಉಪ ವಿಭಾಗದಿಂದ ತಲಾ ಇಬ್ಬರು. ಶಿಕಾರಿಪುರ ಮತ್ತು ತೀರ್ಥಹಳ್ಳಿ ಉಪ ವಿಭಾಗದಿಂದ ತಲಾ 5 ಮಂದಿಯ ಗಡಿಪಾರು (deport) ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಎರಡು ತಿಂಗಳಲ್ಲೆ ಅಧಿಕ (deport)
45 ಮಂದಿ ಪೈಕಿ ಕಳೆದ 2 ತಿಂಗಳಲ್ಲೆ ಅಧಿಕ ಮಂದಿ ಗಡಿಪಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. 22 ಮಂದಿಯನ್ನು ಗಡಿಪಾರು ಮಾಡುವಂತೆ ಕಳೆದ 2 ತಿಂಗಳಲ್ಲಿ ಪ್ರಸ್ತಾವಣೆ ಸಲ್ಲಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕ್ಲಬ್ ಮೇಲೆ ರಾತ್ರಿ ಪೊಲೀಸರ ದಾಳಿ, ಮ್ಯಾನೇಜರ್ ಸೇರಿ 12 ಮಂದಿ ಅರೆಸ್ಟ್
ರೌಡಿಗಳು ಮತ್ತು ರೂಢಿಗತ ಅಪರಾಧಿಗಳಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿಪಾರು ಮಾಡುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ.