ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 2 ಮಾರ್ಚ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಕೊಂಡೊಯ್ಯುತ್ತಿದ್ದ ಬೊಲೇರೋ ಪಿಕಪ್ ವಾಹನದ ಮೇಲೆ ದಾಳಿ ನಡೆಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು, ಪೊಲೀಸರ ನೆರವಿನೊಂದಿಗೆ ದಾಳಿ ನಡೆಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಶಿವಮೊಗ್ಗದ ಓ.ಟಿ.ರಸ್ತೆಯ ಆಜಾದ್ ನಗರದ 3ನೇ ತಿರುವಿನಲ್ಲಿ ದಾಳಿ ನಡೆಸಲಾಯಿತು.
ಹೇಗಾಯ್ತು ದಾಳಿ? ಎಷ್ಟು ಅಕ್ಕಿ ಸಿಕ್ತು?
ಬೊಲೆರೋ ಪಿಕಪ್ ವಾಹನದಲ್ಲಿ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕೊಂಡೊಯ್ಯಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಫುಡ್ ಇನ್ಸ್ ಪೆಕ್ಟರ್ ಮತ್ತು ದೊಡ್ಡಪೇಟೆ ಠಾಣೆ ಪೊಲೀಸರು ದಾಳಿ ನಡೆಸಿದರು.
ಆಜಾದ್ ನಗರದ ಬಳಿ ಬೊಲೆರೋ ಪಿಕಪ್ ವಾಹನ ಬರುತ್ತಿದ್ದಂತೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು, ಪೊಲೀಸರನ್ನು ಕಂಡ ಕೂಡಲೆ ಚಾಲಕ ಮತ್ತು ಪಕ್ಕದ ಸೀಟಿನಲ್ಲಿ ಕುಳಿತಿದ್ದವರು ವಾಹನ ನಿಲ್ಲಿಸಿ ಪರಾರಿಯಾಗಿದ್ದಾರೆ.
ವಾಹನದ ಪರಿಶೀಲನೆ ನಡೆಸಿದಾಗ 50 ಕೆ.ಜಿ. ತೂಕದ ಪ್ಲಾಸ್ಟಿಕ್ ಚೀಲದಲ್ಲಿ ಪಡಿತರ ಅಕ್ಕಿಯನ್ನು ತುಂಬಲಾಗಿತ್ತು. ಸುಮಾರು 80 ಪ್ಲಾಸ್ಟಿಕ್ ಚೀಲದಲ್ಲಿ ಅಕ್ಕಿ ತುಂಬಲಾಗಿತ್ತು. ಇದರ ಮೌಲ್ಯ ಸುಮಾರು 88 ಸಾವಿರ ರೂ. ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಸಯ್ಯದ್ ಮುಜೀಬುಲ್ಲಾ, ಸಯ್ಯದ್ ಮುಯಿನ್ ಮತ್ತು ಬೊಲೆರೋ ಪಿಕಪ್ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ದೊಡ್ಡಪೇಟೆ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.