SHIVAMOGGA LIVE NEWS | 6 ಮಾರ್ಚ್ 2022
ಐದು ವರ್ಷಕ್ಕಿಂತಲೂ ಕೆಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೊ ಲಸಿಕೆ ನೀಡಲು ಜಿಲ್ಲಾಡಳಿತ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು.
ರಾಜೇಂದ್ರನಗರದ ರೋಟರಿ ಶಾಲೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಎಲ್ಲ ರೋಟರಿ ಕ್ಲಬ್ಗಳ ಸಹಯೋಗದಲ್ಲಿ ಆಯೋಜಿಸಿದ್ದ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯ ಇಲಾಖೆ ಪಲ್ಸ್ ಪೋಲಿಯೊ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಐದು ವರ್ಷದೊಳಗಿನ ಶೇ. 90ಕ್ಕೂ ಅಧಿಕ ಮಕ್ಕಳಿಗೆ ಲಸಿಕೆ ನೀಡಬೇಕು. ಇನ್ನುಳಿದ ಮಕ್ಕಳನ್ನು ಎರಡು ಮೂರು ದಿನಗಳಲ್ಲಿ ಲಸಿಕೆ ನೀಡುವ ಅಭಿಯಾನ ಪೂರ್ಣಗೊಳಿಸಬೇಕು ಎಂದ ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್.ಹೊನ್ನಳ್ಳಿ ತಿಳಿಸಿದರು.
ಡಾ. ಎಲ್.ನಾಗರಾಜನಾಯ್ಕ್, ಡಾ. ಪಿ.ನಾರಾಯಣ ಮಾತನಾಡಿ, ಡಾ. ಸತೀಶ್ಚಂದ್ರ, ಪ್ರಮೋದ್, ಡಾ. ಚಂದ್ರಶೇಖರ್, ಡಾ. ಪಿ.ನಾರಾಯಣ್, ಜಿ.ವಿಜಯ್ ಕುಮಾರ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಮಂಜುನಾಥ್ ಕದಂ, ಡಾ. ಹರ್ಷ, ಎಂ.ಪಿ.ಆನಂದಮೂರ್ತಿ, ಎಸ್.ಗಣೇಶ್, ರಾಜಶೇಖರ್ ಮತ್ತಿತರರು ಹಾಜರಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200