ಶಿವಮೊಗ್ಗ ಜಿಲ್ಲೆಯಲ್ಲಿ ನಾಮಪತ್ರ ಹಿಂಪಡೆದ 10 ಅಭ್ಯರ್ಥಿಗಳು, ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ಕಣದಿಂದ ಹಿಂದೆ ಸರಿದಿದ್ದಾರೆ?

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 24 APRIL 2023

SHIMOGA : ವಿಧಾನಸಭೆ ಚುನಾವಣೆ ನಾಮಪತ್ರ ಹಿಂಪಡೆಯಲು (withdraw) ಇವತ್ತು ಕೊನೆಯ ದಿನವಾಗಿತ್ತು. ಶಿವಮೊಗ್ಗ ನಗರ ಮತ್ತು ಸೊರಬ ಕ್ಷೇತ್ರ ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳಲ್ಲಿ ಹತ್ತು ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ ಸರಿದಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga-Election-News-General-Image

ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ಹಿಂದೆ ಸರಿದಿದ್ದಾರೆ?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ಮೂವರು ನಾಮಪತ್ರ ಹಿಂಪಡೆದಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳಾದ ಎಸ್.ಕೃಷ್ಣ, ಎಸ್.ರವಿಕುಮಾರ್‌, ವಿ.ನಾರಾಯಣ ಸ್ವಾಮಿ ಅವರು ನಾಮಪತ್ರ ಹಿಂದಕ್ಕೆ (withdraw) ಪಡೆದಿದ್ದಾರೆ.

ಭದ್ರಾವತಿ ಕ್ಷೇತ್ರದಲ್ಲಿ ಇಬ್ಬರು ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಸ್ವತಂತ್ರವಾಗಿ ಸ್ಪರ್ಧಿಸಿದ್ದ ಮೋಹನ್‌.ಕೆ ಮತ್ತು ನೀಲಂ ಅವರು ನಾಮಪತ್ರ ಹಿಂಪಡೆದಿದ್ದಾರೆ.

ತೀರ್ಥಹಳ್ಳಿ ಕ್ಷೇತ್ರದಲ್ಲಿ ಒಬ್ಬ ಅಭ್ಯರ್ಥಿ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಕಿರಣ್‌ ಕುಮಾರ್.ಹೆಚ್.ಬಿ ಅವರು ನಾಮಪತ್ರ ಹಿಂಪಡೆದಿದ್ದಾರೆ.

ಶಿಕಾರಿಪುರದಲ್ಲಿ ಇಬ್ಬರು ಅಭ್ಯರ್ಥಿಗಳು ಚುನಾವಣಾ ಕಣದಿಂದ ಹೊರ ನಡೆದಿದ್ದಾರೆ. ರಾಜ್ಯ ರೈತ ಸಂಘದ ಶೇಖರಪ್ಪ.ಹೆಚ್‌ ಮತ್ತು ಸ್ವತಂತ್ರ ಅಭ್ಯರ್ಥಿ ರಾಘವೇಂದ್ರ ನಾಯ್ಕ್‌ ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಗ್ರಾಮಾಂತರದಲ್ಲಿ ನಾಮಪತ್ರ ಹಿಂಪಡೆದ ಮೂವರು ಅಭ್ಯರ್ಥಿಗಳು

ಸಾಗರದಲ್ಲಿ ಇಬ್ಬರು ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ಪಡೆದಿದ್ದಾರೆ. ಕೆ.ಲಕ್ಷ್ಮಣ ಮತ್ತು ಬಿ.ಯುವರಾಜ್‌ ಅವರು ಕಣದಿಂದ ಹಿಂದೆ ಸರಿದಿದ್ದಾರೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment