ಶಿವಮೊಗ್ಗ ಲೈವ್.ಕಾಂ | SHIMOGA NEWS | 23 ನವೆಂಬರ್ 2021
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ನಡೆಯುವ ಚುನಾವಣೆಗೆ ಶಿವಮೊಗ್ಗದಲ್ಲಿ ಆರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇದರಿಂದ ಕದನ ಕಣ ಮತ್ತಷ್ಟು ರಂಗೇರಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮೂರು ಅಭ್ಯರ್ಥಿಗಳು ತಲಾ ಮೂರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಉಳಿದ ಮೂವರು ಅಭ್ಯರ್ಥಿಗಳು ತಲಾ ಒಂದೊಂದು ನಾಮಪತ್ರ ಸಲ್ಲಿಸಿದ್ದಾರೆ. ಇವತ್ತು ನಾಮ ಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು.
ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?
ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಅವರು ಮೂರು ನಾಮಪತ್ರ ಸಲ್ಲಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ಡಿ.ಎಸ್.ಅರುಣ್ ಅವರು ಕೂಡ ಮೂರು ನಾಮಪತ್ರ ಸಲ್ಲಿಸಿದ್ದಾರೆ.
ಇನ್ನು, ಪಕ್ಷೇತ್ರರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ವೈ.ಹೆಚ್.ನಾಗರಾಜ್ ಅವರು ಕೂಡ ಮೂರು ನಾಮಪತ್ರ ಸಲ್ಲಿಸಿದ್ದಾರೆ.
ಜೆಡಿಯು ಅಭ್ಯರ್ಥಿ ಶಶಿಕುಮಾರ್ ಗೌಡ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಗಳಾದ ಆರ್.ಎಸ್.ಭುಜಂಗ ಮತ್ತು ಪಿ.ವೈ.ರವಿ ಅವರು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.