ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 6 JULY 2023
SHIMOGA : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ.ರಾಜನಂದಿನಿ ಸೇರಿದಂತೆ 13 ಮಂದಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷ ಉಚ್ಚಾಟನೆ (Expelled) ಮಾಡಲಾಗಿದೆ. ಈ ಸಂಬಂಧ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಆದೇಶ ಹೊರಡಿಸಿದ್ದಾರೆ.

ಉಚ್ಚಾಟನೆಗೆ ಕಾರಣವೇನು?
ಸಾಗರ ಕ್ಷೇತ್ರದಲ್ಲಿ ಕಾಂಗ್ರೆಸ್ ತೊರೆದ ಮತ್ತು ಪಕ್ಷದಲ್ಲಿ ಇದ್ದುಕೊಂಡು ಚುನಾವಣೆ ಸಂದರ್ಭ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಮೇಲೆ 13 ಮಂದಿಯನ್ನು ಉಚ್ಚಾಟನೆ (Expelled) ಮಾಡಲಾಗಿದೆ. ಡಾ. ರಾಜನಂದಿನಿ ಕಾಗೋಡು ಅವರು ಕಾಂಗ್ರೆಸ್ ಪಕ್ಷ ತೊರೆದು ಮೂರು ತಿಂಗಳ ಹಿಂದೆ ಬಿಜೆಪಿ ಸೇರ್ಪಡೆಯಾಗಿದ್ದರು.

ಯಾರನ್ನೆಲ್ಲ ಉಚ್ಚಾಟಿಸಲಾಗಿದೆ?
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಭರ್ಮಪ್ಪ ಅಂದಾಸುರ, ಹೊನಗೋಡು ರತ್ನಾಕರ್, ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ನಗರಸಭೆ ಮಾಜಿ ಸದಸ್ಯ ಜಿ.ಕೆ.ಭೈರಪ್ಪ, ಬ್ಲಾಕ್ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ರಮೇಶ್ ಗಾಳಿಪುರ, ಮಾಸೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟೇಶ್ ಮೆಳವರಿಗೆ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪ್ರಕಾಶ್ ಲವಿಗ್ಗೆರೆ, ಹೂಸಂತೆ ಗ್ರಾಮ ಪಂಚಾಯಿತಿ ಸದಸ್ಯ ಶಿವಪ್ಪ, ಆನಂದಪುರಂ ಗ್ರಾಮ ಪಂಚಾಯಿತಿ ಸದಸ್ಯ ಮೋಹನ್, ತ್ಯಾಗರ್ತಿ ಘಟಕದ ಮಾಜಿ ಅಧ್ಯಕ್ಷ ಅಬ್ದುಲ್ ಹಮೀದ್, ಹಿರೇಬಿಲಗುಂಜಿ ಘಟಕದ ಅಧ್ಯಕ್ಷ ರಮೇಶ ಹೂಸಂತೆ, ಗ್ರಾಮ ಪಂಚಾಯಿತಿ ಸದಸ್ಯ ಎಂ.ಹೆಚ್.ವೀರೇಂದ್ರ ಮಡಸೂರು ಉಚ್ಚಾಟನೆ ಮಾಡಲಾಗಿದೆ.
ಇದನ್ನೂ ಓದಿ – ಭದ್ರಾವತಿ ನಗರಸಭೆಗೆ ನೂತನ ಅಧ್ಯಕ್ಷೆ, ಸದಸ್ಯರಾಗಿ ಮೊದಲ ಅವಧಿಯಲ್ಲೆ ಒಲಿದ ಮಹತ್ವದ ಹುದ್ದೆ
LATEST NEWS
- ಶಿವಮೊಗ್ಗದಲ್ಲಿ ಬಂಜಾರ ಮುಖಂಡರು ಪೊಲೀಸ್ ವಶಕ್ಕೆ, ಸಭೀಕರಿಲ್ಲದೆ ನಡೆಯಿತು ಸೇವಾಲಾಲ್ ಜಯಂತಿ

- ಶಿವಮೊಗ್ಗದಲ್ಲಿ ಕೆಎಎಸ್ ಅಧಿಕಾರಿ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ, ಆಗಿದ್ದೇನು?

- ಬಿಳಕಿಯಲ್ಲಿ ಅಂಗನವಾಡಿ ಸಹಾಯಕಿ ಮೃತದೇಹ ಪತ್ತೆ

- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

About The Editor
ನಿತಿನ್ ಆರ್.ಕೈದೊಟ್ಲು





