SHIVAMOGGA LIVE NEWS | 16 DECEMBER 2022
ಶಿವಮೊಗ್ಗ : ಬೆಂಗಳೂರಿನಲ್ಲಿ ಬಿಜೆಪಿ ಪ್ರಕೋಷ್ಠಗಳ (bjp units) ರಾಜ್ಯ ಸಮಾವೇಶ ಆಯೋಜಿಸಲಾಗಿದೆ. ಜಿಲ್ಲೆಯಿಂದ 750 ಮಂದಿ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೇಘರಾಜ್ ಅವರು, ವಿವಿಧ ಉದ್ಯೋಗಗಳಲ್ಲಿ ತೊಡಗಿಸಿಕೊಂಡವರು ರಾಜಕೀಯ ಕ್ಷೇತ್ರದಲ್ಲಿ ಕೆಲಸ ಮಾಡಲು ಸಾದ್ಯವಾಗುವುದಿಲ್ಲ. ಆದರೆ ರಾಜಕೀಯ ಆಸಕ್ತಿ ಇರುತ್ತದೆ. ಒಂದೇ ರೀತಿಯ ಯೋಚನೆ, ಯೋಜನೆ ಮಾಡುವವರನ್ನು ಪ್ರಕೋಷ್ಠಗಳಿಗೆ ಸೇರಿಕೊಳ್ಳಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗದ ಕಥೆ ಈಗ ಅಮೆಜಾನ್ ಪ್ರೈಮ್‌ನಲ್ಲಿ ವೆಬ್ ಸೀರಿಸ್, ಡಿ.16ಕ್ಕೆ 8 ಎಪಿಸೋಡ್ ರಿಲೀಸ್
ಸಹಕಾರ ಪ್ರಕೋಷ್ಠ, ಕಾನೂನು ಪ್ರಕೋಷ್ಠ, ಕೈಗಾರಿಕ ಪ್ರಕೋಷ್ಠ, ವೈದ್ಯಕೀಯ ಪ್ರಕೋಷ್ಠ, ಹಿರಿಯ ನಾಗರಿಕ ಪ್ರಕೋಷ್ಠ, ಶಿಕ್ಷಕರ ಪ್ರಕೋಷ್ಠ ಸೇರಿದಂತೆ 24 ವಿವಿಧ ಪ್ರಕೋಷ್ಠಗಳನ್ನು ರಚಿಸಲಾಗಿದೆ. ಪ್ರತಿ ನಾಲ್ಕು ಪ್ರಕೋಷ್ಠಗಳಿಗೆ ಒಂದು ಸಂಕುಲ ರಚಿಸಲಾಗಿದೆ. ಹಾಗಾಗಿ 6 ಸಂಕುಲಗಳಾಗಿವೆ. ಜ್ಞಾನೇಶ್ವರ್ ಅವರು ಈ ಪ್ರಕೋಷ್ಠಗಳಿಗೆ ಜಿಲ್ಲಾ ಸಂಯೋಜಕರಾಗಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ – ಚೆನ್ನೈ ಎಕ್ಸ್ ಪ್ರೆಸ್ ರೈಲು ಕುರಿತು ಮಹತ್ವದ ನಿರ್ಧಾರ ಪ್ರಕಟಿಸಿದ ರೈಲ್ವೆ ಇಲಾಖೆ
ಡಿ.18ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಶಕ್ತಿ ಸಂಗಮ ಹೆಸರಿನಲ್ಲಿ ಸಮಾವೇಶ ನಡೆಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ವಿವಿಧ ಪ್ರಕೋಷ್ಠಗಳ 20 ಸಾವಿರ ಜನರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಅವರು ಸಮಾವೇಶ ಉದ್ಘಾಟಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರು ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ.ಭಾನು ಪ್ರಕಾಶ್ ಅವರು ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿದ್ದಾರೆ ಎಂದು ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200