ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 23 NOVEMBER 2022
SHIMOGA | ಮುಂಬರುವ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಪಕ್ಷದಿಂದ ಟಿಕೆಟ್ (congress ticket) ಬಯಸಿ ಏಳು ವಿದಾನಸಭೆ ಕ್ಷೇತ್ರದಲ್ಲಿ 42 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಎರಡು ಕ್ಷೇತ್ರದಲ್ಲಿ ಆಕಾಂಕ್ಷಿಗಳಿಗೆ ಪ್ರತಿಸ್ಪರ್ಧಿಗಳೆ ಇಲ್ಲದಿರುವುದು ವಿಶೇಷವಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಸ್ಥಳೀಯ ಸಂಸ್ಥೆಗಳ ಸದಸ್ಯರು, ಮುಖಂಡರು ಈ ಭಾರಿ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದಾರೆ. ಭದ್ರಾವತಿ ಮತ್ತು ಸೊರಬ ಕ್ಷೇತ್ರದಲ್ಲಿ ತಲಾ ಒಂದು ಅರ್ಜಿ ಬಂದಿರುವುದು ವಿಶೇಷ. ತೀರ್ಥಹಳ್ಳಿ ಕ್ಷೇತ್ರದಲ್ಲಿ ಮೂವರು ಅರ್ಜಿ ಸಲ್ಲಿಸಿದ್ದಾರೆ. ಉಳಿದ ನಾಲ್ಕು ಕ್ಷೇತ್ರದಲ್ಲಿ ತೀವ್ರ ಪೈಪೋರ್ಟಿ ಏರ್ಪಟ್ಟಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
(congress ticket)
ಯಾವ್ಯಾವ ಕ್ಷೇತ್ರದಲ್ಲಿ ಹೇಗಿದೆ ಪೈಪೋಟಿ?
ಶಿವಮೊಗ್ಗ ನಗರ ಕ್ಷೇತ್ರದಿಂದ 9 ಅಕಾಂಕ್ಷಿಗಳು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕೆ.ಬಿ.ಪ್ರಸನ್ನ ಕುಮಾರ್, ಹೆಚ್.ಎಸ್.ಸುಂದರೇಶ್, ಹೆಚ್.ಸಿ.ಯೋಗೇಶ್, ಎಸ್.ಪಿ.ದಿನೇಶ್, ಎಸ್.ಕೆ.ಮರಿಯಪ್ಪ, ಇಮ್ತಿಯಾಜ್, ಶೀನ್ ಜೋಸೆಫ್, ವೈ.ಹೆಚ್.ನಾಗರಾಜ್, ನರಸಿಂಹಮೂರ್ತಿ ಅವರು ಅರ್ಜಿ ಸಲ್ಲಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ 11 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಜಿ.ಪಲ್ಲವಿ, ಕೆ.ಅನಿತಾ ಕುಮಾರ್, ಡಾ. ಶ್ರೀನಿವಾಸ ಕರಿಯಣ್ಣ, ಬಲದೇವ ಕೃಷ್ಣ, ನಾರಾಯಣ ಸ್ವಾಮಿ, ಶಿವಮೂರ್ತಿ ನಾಯ್ಕ್, ಸುಧಾಕರ್, ದಿನೇಶ್ ಬಸವಣ್ಯಪ್ಪ, ಡಾ. ಕೃಷ್ಣ, ಶಂಕರ್, ಮಲ್ಲಪ್ಪ ಅವರು ಅರ್ಜಿ ಸಲ್ಲಿಸಿದ್ದಾರೆ.
ತೀರ್ಥಹಳ್ಳಿ ಕ್ಷೇತ್ರದಿಂದ 3 ಆಕಾಂಕ್ಷಿಗಳಿದ್ದಾರೆ. ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥಗೌಡ, ಕಡ್ತೂರ ದಿನೇಶ್ ಅವರು ಟಿಕೆಟ್ ಗಾಗಿ ಅರ್ಜಿ ಹಾಕಿದ್ದಾರೆ.
ಶಿಕಾರಿಪುರದಿಂದ 8 ಆಕಾಂಕ್ಷಿಗಳಿದ್ದಾರೆ. ಮಾಲತೇಶ್, ದರ್ಶನ್ ಉಳ್ಳಿ, ನಾಗರಾಜ ಗೌಡ, ರಾಘವೇಂದ್ರ ನಾಯ್ಕ್, ಪುಷ್ಪಾ ಶಿವಕುಮಾರ್, ಬಿ.ಎನ್.ಮಹಾಲಿಂಗಪ್ಪ, ನಿರ್ಮಲಾ ಪಾಟೀಲ್, ಕವಲಿ ಗಂಗಾಧರ್ ಅವರು ಆಕಾಂಕ್ಷಿಗಳಾಗಿದ್ದಾರೆ.
ಸಾಗರ ಕ್ಷೇತ್ರದಿಂದ ಟಿಕೆಟ್ ಗಾಗಿ 7 ಅರ್ಜಿಗಳಿವೆ. ಕಾಗೋಡು ತಿಮ್ಮಪ್ಪ, ಬೇಳೂರು ಗೋಪಾಲಕೃಷ್ಣ, ಡಾ. ರಾಜನಂದಿನಿ, ಬಿ.ಆರ್.ಜಯಂತ್, ಹಕ್ರೆ ಮಲ್ಲಿಕಾರ್ಜುನ, ಕಲಗೋಡು ರತ್ನಾಕರ್, ಹೊನಗೋಡು ರತ್ನಾಕರ್ ಆಕಾಂಕ್ಷಿಗಳಾಗಿದ್ದಾರೆ.
ಸೊರಬದಲ್ಲಿ ಮಧು ಬಂಗಾರಪ್ಪ, ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ ಅವರು ಅರ್ಜಿ ಸಲ್ಲಿಸಿದ್ದಾರೆ.
(congress ticket)
ಕುತೂಹಲ ಮೂಡಿಸಿದ ಶಿವಮೂರ್ತಿ ನಾಯ್ಕ್
ಪರಿಶಿಷ್ಟ ಜಾತಿಯ ಅಭ್ಯರ್ಥಿಗೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಮೀಸಲಾಗಿದೆ. ಈ ಕ್ಷೇತ್ರದತ್ತ ಮಾಜಿ ಸಚಿವ ಶಿವಮೂರ್ತಿ ನಾಯ್ಕ್ ವಲಸಗೆ ಯೋಜಿಸಿದ್ದಾರೆ. ಈ ಹಿಂದೆ ದಾವಣಗೆರೆ ಜಿಲ್ಲೆಯ ಮಾಯಕೊಂಡ ಕ್ಷೇತ್ರದಿಂದ ಶಿವಮೂರ್ತಿ ನಾಯ್ಕ್ ಅವರು ಗೆಲುವು ಸಾಧಿಸಿದ್ದರು. ಸಚಿವರಾಗಿಯು ಜವಾಬ್ದಾರಿ ನಿಭಾಯಿಸಿದ್ದರು. ಈಗ ಅವರು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದತ್ತ ವಲಸೆಗೆ ಯೋಜಿಸಿರುವುದು ಕುತೂಹಲ ಮೂಡಿಸಿದೆ.
(congress ticket)
ಸಾಗರದಲ್ಲಿ ಮಗಳು, ಅಳಿಯ, ಶಿಷ್ಯ
ಸಾಗರ ವಿಧಾನಸಭೆ ಕ್ಷೇತ್ರದಲ್ಲಿ ತಂದೆ – ಮಗಳು, ಮಾವ – ಅಳಿಯ, ಗುರು – ಶಿಷ್ಯ ಸಂಬಂಧದ ಲೆಕ್ಕಾಚಾರ ಆರಂಭವಾಗಿದೆ. ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಜೊತೆ ಪುತ್ರಿ ಡಾ. ರಾಜನಂದಿನಿ ಅವರು ಅರ್ಜಿ ಸಲ್ಲಿಸಿದ್ದಾರೆ. ಕಾಗೋಡು ತಿಮ್ಮಪ್ಪ ಅವರ ಅಳಿಯ ಬೇಳೂರು ಗೋಪಾಲಕೃಷ್ಣ, ಕಾಗೋಡು ತಿಮ್ಮಪ್ಪ ಅವರ ಶಿಷ್ಯರೆಂದು ಗುರುತಿಸಿಕೊಂಡಿರುವ ಬಿ.ಆರ್.ಜಯಂತ್ ಸೇರಿದಂತೆ ಹಲವರು ಅರ್ಜಿ ಸಲ್ಲಿಸಿದ್ದಾರೆ.
ಎರಡು ಕ್ಷೇತ್ರದಲ್ಲಿ ವಿರೋಧಿಗಳೇ ಇಲ್ಲ
ಶಿವಮೊಗ್ಗ ಜಿಲ್ಲೆಯಲ್ಲಿ ಭದ್ರಾವತಿ ಮತ್ತು ಸೊರಬ ಕ್ಷೇತ್ರದಲ್ಲಿ ತಲಾ ಒಂದು ಅರ್ಜಿ ಬಂದಿದೆ. ಭದ್ರಾತಿಯಿಂದ ಶಾಸಕ ಬಿ.ಕೆ.ಸಂಗಮೇಶ್ವರ ಅವರು ಪುನಃ ಟಿಕೆಟ್ ಬಯಸಿದ್ದಾರೆ. ಸೊರಬ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಅವರು ಅರ್ಜಿ ಹಾಕಿದ್ದಾರೆ. ಇವರಿಬ್ಬರಿಗೆ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಪ್ರತಿಸ್ಪರ್ಧಿಯೆ ಇಲ್ಲ.
ಐಎಎಸ್, ಇಂಜಿನಿಯರ್, ಡಾಕ್ಟರ್
ಟಿಕೆಟ್ ಆಕಾಂಕ್ಷಿಗಳಲ್ಲಿ ನಿವೃತ್ತ ಅಧಿಕಾರಿಗಳು, ವೈದ್ಯರಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಿಂದ ನಿವೃತ್ತ ಐಎಎಸ್ ಅಧಿಕಾರಿ ಬಲದೇವ ಕೃಷ್ಣ, ನಿವೃತ್ತ ಇಂಜಿನಿಯರ್ ಮಲ್ಲಪ್ಪ, ವೈದ್ಯ ಡಾ. ಶ್ರೀನಿವಾಸ ಕರಿಯಣ್ಣ, ಡಾ. ಕೃಷ್ಣ ಅವರು ಅರ್ಜಿ ಸಲ್ಲಿಸಿದ್ದಾರೆ. ಡಾ. ಶ್ರೀನಿವಾಸ ಕರಿಯಣ್ಣ ಅವರು ಈ ಹಿಂದೆ ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಇನ್ನು, ಸಾಗರ ಕ್ಷೇತ್ರದಿಂದ ಡಾ. ರಾಜನಂದಿನಿ ಕಾಗೋಡು ಅವರು ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಕ್ಲಿಕ್ ಮಾಡಿ ಇದನ್ನೂ ಓದಿ | ವಿಜಯೇಂದ್ರ ಹಾದಿ ಸುಗಮ, ಬಳಿಗಾರ್ ಬಿಜೆಪಿ ಸೇರ್ಪಡೆ, ಗಮನಿಸಬೇಕಾದ 4 ಅಂಶಗಳಿವು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.