SHIVAMOGGA LIVE NEWS | 15 APRIL 2023
SHIMOGA : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಜಿಲ್ಲೆಯಲ್ಲಿ ಇಂದು 6 ನಾಮಪತ್ರ (Nomination) ಸಲ್ಲಿಕೆಯಾಗಿದೆ. ಹಾಲಿ ಶಾಸಕ ಸೇರಿದಂತೆ ಆರು ಮಂದಿ ವಿವಿಧ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಯಾರೆಲ್ಲ ನಾಮಪತ್ರ ಸಲ್ಲಿಸಿದ್ದಾರೆ?
ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ(ಕೆ.ಆರ್.ಎಸ್) ಸುಮಿತ್ರಾ ಬಾಯಿ 1 ನಾಮಪತ್ರ, ಶಿವಮೊಗ್ಗ ಕ್ಷೇತ್ರದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ರಾಜೇಂದ್ರ ಡಿ ಅವರು 1 ನಾಮಪತ್ರ, ಸೊರಬದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಟಿ.ಮಂಜುನಾಥ ಅವರು 2 ನಾಮಪತ್ರಗಳು, ಸಾಗರ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿಯಿಂದ ಹೆಚ್ ಹಾಲಪ್ಪ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ತೀ.ನ.ಶ್ರೀನಿವಾಸ ತಲಾ 1 ಸೇರಿ ಒಟ್ಟು 5 ಅಭ್ಯರ್ಥಿಗಳು 6 ನಾಮಪತ್ರಗಳನ್ನು (Nomination) ಸಲ್ಲಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 7 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಕಿರು ಪರಿಚಯ ಇಲ್ಲಿದೆ
ಶಿವಮೊಗ್ಗ ಗ್ರಾಮಾಂತರ, ತೀರ್ಥಹಳ್ಳಿ ಹಾಗೂ ಶಿಕಾರಿಪುರ ಕ್ಷೇತ್ರದಲ್ಲಿ ಯಾವುದೇ ನಾಮಪತ್ರ ಸಲ್ಲಿಸಿಲ್ಲ. ಈವರೆಗೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳು 5 ಅಭ್ಯರ್ಥಿಗಳು 7 ನಾಮಪತ್ರಗಳನ್ನು ಸಲ್ಲಿಸಿದ್ದಾರೆ.