SHIVAMOGGA LIVE NEWS | 19 AUGUST 2023
SORABA : ಪಕ್ಷದ ಆದೇಶ ಧಿಕ್ಕರಿಸಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆ ಸೊರಬ ತಾಲೂಕಿನ ಮೂವರು ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಇಬ್ಬರು ಪಕ್ಷದ ಕಾರ್ಯಕರ್ತರನ್ನು (Party workers) ಆರು ವರ್ಷ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ (Expelled) ಮಾಡಿ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಆದೇಶಿಸಿದ್ದಾರೆ.
ಸೊರಬ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಉಳವಿ ಮತ್ತು ಕಾನಲೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ವೇಳೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಆದೇಶ ಉಲ್ಲಂಘಿಸಿದ್ದರು. ಈ ಹಿನ್ನೆಲೆ ಬ್ಲಾಕ್ ಕಾಂಗ್ರೆಸ್ ಸೂಚನೆ ಮೇರೆಗೆ ಜಿಲ್ಲಾ ಕಾಂಗ್ರೆಸ್ ಐವರನ್ನು ಉಚ್ಛಾಟನೆ ಮಾಡಿದೆ.
ಇದನ್ನೂ ಓದಿ – ಪಿಳ್ಳಂಗಿರಿ ಶಾಲೆಯಲ್ಲಿ ಮಕ್ಕಳಿಗೆ ಮೊಟ್ಟೆ, ಬಾಳೆ ಹಣ್ಣು, ಶೇಂಗಾ ಚಿಕ್ಕಿ, ಜಿಲ್ಲೆಯಾದ್ಯಂತ ವಿತರಣೆಗೆ ಚಾಲನೆ
ಉಳವಿ ಗ್ರಾಮ ಪಂಚಾಯಿತಿ ಸದಸ್ಯರಾದ ಪರಶುರಾಮ ಕೋಳಿಸಾಲು, ತನ್ವೀರ್ ಅಹಮದ್ ಉಳವಿ, ಪಕ್ಷದ ಕಾರ್ಯಕರ್ತ ನಾಗರಾಜ ಕೆ.ಬಿ. ಕೈಸೋಡಿ, ಕಾನಲೆ ಗ್ರಾಮ ಪಂಚಾಯಿತಿ ಸದಸ್ಯೆ ಜಾನಕಿ ರಾಮಕೃಷ್ಣ, ಪಕ್ಷದ ಕಾರ್ಯಕರ್ತ ರಾಮಕೃಷ್ಣ ಪಡವಗೋಡು ಅವರನ್ನು ಉಚ್ಛಾಟಿಸಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200