ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 15 MARCH 2024
SHIMOGA : ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಮಾ.20ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅಂದಿನಿಂದ ನಿರಂತರ ಪ್ರಚಾರ ನಡೆಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಧು ಬಂಗಾರಪ್ಪ, ಮಾ.20ರಂದು ಗೀತಾ ಶಿವರಾಜ್ ಕುಮಾರ್ ಮತ್ತು ಶಿವರಾಜ್ ಕುಮಾರ್ ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಇದಕ್ಕೂ ಮೊದಲು, ಮಾ.17ರಂದು ಪೂರ್ವಭಾವಿ ಸಭೆ ನಡೆಯಲಿದೆ ಎಂದರು.
400 ಸಭೆ, ತಾಲೂಕು ಮಟ್ಟಕ್ಕೆ ಸಿಎಂ, ಡಿಸಿಎಂ
ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ಕ್ಷೇತ್ರ ವ್ಯಾಪ್ತಿಯಲ್ಲಿ 400 ಸಭೆ ನಡೆಸಲಿದ್ದಾರೆ. ತಾಲೂಕು ಮಟ್ಟದ ಸಭೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಕರೆಯಿಸುವ ಯೋಜನೆ ಇದೆ. ಶಿವರಾಜ್ ಕುಮಾರ್ ಅವರು ಹೋಬಳಿ ಮಟ್ಟದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದರು.
ಗ್ಯಾರಂಟಿ ಬಲದ ಮೇಲೆ ಚುನಾವಣೆ
ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರದ ಮೇಲೆ ಜನರಲ್ಲಿ ವಿಶ್ವಾಸ ಮೂಡಿದೆ. ಈ ಯೋಜನೆಗಳನ್ನು ಮುಂದಿಟ್ಟುಕೊಂಡೆ ಪ್ರಚಾರ ನಡೆಸುತ್ತೇವೆ. ಗೀತಾ ಶಿವರಾಜ್ ಕುಮಾರ್ ಅವರು ಸಕ್ರಿಯವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಮುಂದೆ ಸಂಸದರಾಗಿಯು ಗೀತಾ ಶಿವರಾಜ್ ಕುಮಾರ್ ಅವರು ಜವಾಬ್ದಾರಿ ನಿರ್ವಹಿಸಲಿದ್ದಾರೆ. ಹತ್ತು ವರ್ಷದ ಹಿಂದೆ ಶಿವಮೊಗ್ಗ ಕ್ಷೇತ್ರಕ್ಕೆ ರಾಘವೇಂದ್ರ ಅವರ ಕೊಡುಗೆ ಏನಿತ್ತು. ಆಗ ಅವರ ಬಳಿ ಹಣ ಮಾತ್ರ ಇತ್ತು ಎಂದು ಮಧು ಬಂಗಾರಪ್ಪ ಕಿಡಿಕಾರಿದರು.
ಮಾರಿಕಾಂಬೆ ದರ್ಶನ ಪಡೆದ ಸಚಿವ
ಇನ್ನು, ಮಾರಿಕಾಂಬೆ ಜಾತ್ರೆ ಹಿನ್ನೆಲೆ ಸಚಿವ ಮಧು ಬಂಗಾರಪ್ಪ ಅವರು ಕೋಟೆ ರಸ್ತೆಯ ಮಾರಿಕಾಂಬ ದೇಗುಲಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು. ಇದೇ ವೇಳೆ ಮಾರಿಕಾಂಬ ದೇಗುಲ ಸಮಿತಿ ವತಿಯಿಂದ ಸಚಿವ ಮಧು ಬಂಗಾರಪ್ಪ ಅವರನ್ನು ಗೌರವಿಸಲಾಯಿತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಮನೆ ರೆಡಿ, ವಾರ್ ರೂಂ ಕೂಡ ಸಿದ್ಧ, ಎಲ್ಲಿದೆ ಮನೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422