ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 16 JANUARY 2024
SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಏಕವಚನ ಮತ್ತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಅವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ನೇತೃತ್ವದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಅನಂತ ಕುಮಾರ್ ಹೆಗಡೆ ವಿರುದ್ಧ ಘೋಷಣೆ ಕೂಗಿದರು. ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಿನಿಸ್ಟರ್ vs ಸಂಸದ, ಪರಸ್ಪರ ಟೀಕೆ, ಸವಾಲು, ಕಾರಣವೇನು?
ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಸುಂದರೇಶ್, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗದ ಜನಪ್ರಿಯ ನಾಯಕ. ಅವರ ವಿರುದ್ಧ ಏಕವಚನದ ಮಾತು ಖಂಡನಾರ್ಹ. ಬಿಜೆಪಿಯಲ್ಲಿ ಒಂದಷ್ಟು ಹುಚ್ಚರಿದ್ದಾರೆ. ಚುನಾವಣೆ ಹೊತ್ತಲ್ಲಿ ಮೋದಿ ಅಣತಿಯಂತೆ ಇಂತಹವರನ್ನು ಹೊರ ಬಿಟ್ಟಿದ್ದಾರೆ. ದೇಶದಲ್ಲಿ ಕೋಮು ಗಲಭೆ ಸೃಷ್ಟಿಸಿ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ವಿವಿಧ ಘಟಕಗಳ ಅಧ್ಯಕ್ಷರು, ಪ್ರಮುಖರು ಭಾಗವಹಸಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422