ಶಿವಮೊಗ್ಗ ಲೈವ್.ಕಾಂ | 19 ಏಪ್ರಿಲ್ 2019
ಮೈತ್ರಿ ಪಕ್ಷದ ಪಾಲಿನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಎಂಟ್ರಿಯಾದ ಮೊದಲ ದಿನವೇ ಬಿಗ್ ಬ್ರೇಕಿಂಗ್ ನ್ಯೂಸ್ ನೀಡಿದ್ದಾರೆ. ಭದ್ರಾವತಿ ಶಾಸಕ ಸಂಗಮೇಶ್ ಮತ್ತು ಮಾಜಿ ಶಾಸಕ ಅಪ್ಪಾಜಿಗೌಡ ಒಟ್ಟಿಗೆ ಕೈ ಜೋಡಿಸುವಂತೆ ಮಾಡಿದ್ದಾರೆ.
ತುರ್ತು ಸಭೆ ನಡಸಿ, ಸಂಗಮೇಶ್ ಮತ್ತು ಅಪ್ಪಾಜಿಗೌಡ ನಡುವೆ ಒಮ್ಮತ ಮೂಡಿಸಿದ್ದಾರೆ. ಬೆಳಗ್ಗೆಯಿಂದಲೇ ಇಬ್ಬರೂ, ಭದ್ರಾವತಿ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟಿಗೆ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ. ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ಅಪ್ಪಾಜಿಗೌಡ ಮತ್ತು ಸಂಗಮೇಶ್ ಹ್ಯಾಂಡ್ ಶೇಕ್ ಮಾಡಿಸಿ, ಒಗ್ಗಟ್ಟು ಪ್ರದರ್ಶಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಯಾರೆಲ್ಲ ಏನಂದರು?
ಡಿ.ಕೆ.ಶಿವಕುಮಾರ್ | ಇಬ್ಬರೂ ಒಂದಾಗಿ ಭದ್ರಾವತಿ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಕಾರ್ಯಕರ್ತರು ಕೂಡ ಒಟ್ಟಿಗೆ ಪ್ರಚಾರ ನಡೆಸಬೇಕು. ಮೈತ್ರಿ ಧರ್ಮವನ್ನು ಪಾಲಿಸಬೇಕು.
ಸಂಗಮೇಶ್ | ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುವುದೇ ನಮ್ಮ ಗುರಿ. ಹಾಗಾಗಿ ನಮ್ಮಿಬ್ಬರ ನಡುವಿನ ಭಿನ್ನಾಭಿಪ್ರಾಯವನ್ನು ಮರೆತು ಒಂದಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ.
ಅಪ್ಪಾಜಿಗೌಡ | ಭದ್ರಾವತಿ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಒಂದಾದರೆ, ಮಧು ಬಂಗಾರಪ್ಪ ಗೆಲುವು ಸಾಧ್ಯ. ಇದು ಐತಿಹಾಸಿಕ ಘಟನೆ ಆಗಲಿದೆ. ಹಾಗಾಗಿ ನಾವು ಭಿನ್ನಭಿಪ್ರಾಯ ಬಿಟ್ಟಿದ್ದೇವೆ. ಕಾರ್ಯಕರ್ತರು ಕೂಡ ಒಟ್ಟಿಗೆ ಕೆಲಸ ಮಾಡಬೇಕು.
ಸಭೆಯಲ್ಲಿ ಸಚಿವರಾದ ಪುಟ್ಟರಾಜು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸಿ.ತಮ್ಮಣ್ಣ, ಡಿ.ಕೆ.ಸುರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಸೇರಿದಂತೆ ಹಲವರು ಇದ್ದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200