ಶಿವಮೊಗ್ಗ: ಶೂನ್ಯ ಸಾಧನೆ ಮಾಡಿರುವ ರಾಜ್ಯ ಸರ್ಕಾರ ಸಾಧನಾ ಸಮಾವೇಶ (convention) ನಡೆಸುತ್ತಿರುವುದು ವಿಪರ್ಯಾಸ ಎಂದು ಶಾಸಕ ಆರಗ ಜ್ಞಾನೇಂದ್ರ ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ಕಚೇರಿಯಲ್ಲಿ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಆರಗ ಜ್ಞಾನೇಂದ್ರ ಮಾತನಾಡಿದರು.
ಆರಗ ಆರೋಪ, ಇಲ್ಲಿದೆ ಪಾಯಿಂಟ್ಸ್
ರಾಜ್ಯ ಸರ್ಕಾರ ವಿದ್ಯುತ್, ಮಹಿಳೆಯರಿಗೆ ಬಸ್ ಪ್ರಯಾಣ ಉಚಿತವಾಗಿ ನೀಡಿದೆ. ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಸಿದೆ. ಜನರ ಜೀವನ ದುಸ್ತರ ಮಾಡಿದೆ. ಆದರೂ ತಮ್ಮ ಸರ್ಕಾರದ ಸಾಧನೆ ಬಗ್ಗೆ ಸಮಾವೇಶ ಮಾಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅನುಭವದಲ್ಲಿ ರಾಜ್ಯವನ್ನು ಉತ್ತಮವಾಗಿ ಅಭಿವೃದ್ದಿ ಮಾಡಬಹುದಿತ್ತು. ಆದರೆ ಪರಿಶಿಷ್ಟರಿಗೆ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವ ಮೂಲಕ ದುರ್ಬಳಕೆ ಮಾಡಿದ್ದಾರೆ. ಗುತ್ತಿಗೆದಾರರು, ಶಾಸಕರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಕೇಳಿದರೆ ಇಲ್ಲ ಎನ್ನುತ್ತಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್‌ಗೆ ರಾಜ್ಯ ಸರಕಾರ ಎಟಿಎಂ ಆಗಿದೆ. ಪ್ರಿಯಾಂಕ ಖರ್ಗೆ ಟ್ರಸ್ಟ್‌ಗೆ ಅಕ್ರಮ ಭೂಮಿ ಮಂಜೂರು ಮಾಡಲಾಗಿದೆ. ಪೌಷ್ಠಿಕ ಆಹಾರ ಖರೀದಿಯಲ್ಲಿ 75 ಕೋಟಿ ಹಗರಣ, ಮೆಸ್ಕಾಂನಲ್ಲಿ 15 ಸಾವಿರ ಕೋಟಿ ಹಗರಣ ನಡೆದಿರುವ ಬಗ್ಗೆ ಬಿಜೆಪಿ ಪ್ರಶ್ನಿಸಿದರೂ ಕಾಂಗ್ರೆಸ್ ಉತ್ತರ ನೀಡಲಿಲ್ಲ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಪೊಲೀಸರ ಮೇಲೆ ಹಲ್ಲೆ, ಸ್ವತಃ ಮುಖ್ಯಮಂತ್ರಿಯವರೆ ಪೊಲೀಸ್ ಮೇಲೆ ಕೈ ಮಾಡಲು ಮುಂದಾಗಿದ್ದು, ಬಾಂಬ್ ಹಾಕುವವರನ್ನು ಬ್ರದರ್ಸ್ ಎನ್ನುವುದು ಹೀಗೆ ಒಲೈಕೆ ರಾಜಕಾರಣವೆ ರಾಜ್ಯ ಸರಕಾರದ ಸಾಧನೆ. ಆದಷ್ಟು ಬೇಗ ಈ ರಾಜ್ಯ ಸರ್ಕಾರ ತೊಲಗಬೇಕಿದೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ.ಜಗದೀಶ್, ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಡಿ.ಎಸ್.ಅರುಣ್, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಸಿ.ಹೆಚ್.ಮಾಲತೇಶ್, ಹರಿಕೃಷ್ಣ ಮತ್ತಿತರರಿದ್ದರು.

ಇದನ್ನೂ ಓದಿ » ಸೊರಬದಲ್ಲಿ ತಟ್ಟೆ ಬ್ಯಾಂಕ್ ಆರಂಭ, ಇವತ್ತು ತೀರ್ಥಹಳ್ಳಿಯಲ್ಲಿ ಉದ್ಘಾಟನೆ, ಏನಿದು ತಟ್ಟೆ ಬ್ಯಾಂಕ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200