ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS |10 JANUARY 2023
ಶಿವಮೊಗ್ಗ : ಆಮ್ ಆದ್ಮಿ ಪಕ್ಷದ (Aam Admi Party) ಪರವಾಗಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ಅವರು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಎಎಪಿ ರಾಜ್ಯ ಉಪಾಧ್ಯಕ್ಷ, ಮಾಜಿ ಐಪಿಎಸ್ (IPS) ಅಧಿಕಾರಿ ಭಾಸ್ಕರ್ ರಾವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್ ಅವರು, ರಾಜಕೀಯವಾಗಿ ಶಿವಮೊಗ್ಗ ಜಿಲ್ಲೆ ಅತ್ಯಂತ ಪ್ರಮುಖ ಕ್ಷೇತ್ರವಾಗಿದೆ. ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಂದಲು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ತಿಳಿಸಿದರು. (Arvind Kejriwal)
ಟಾಸ್ಕ್ ಫೋರ್ಸ್ ಇದ್ದರು ಕ್ರಮವಿಲ್ಲ
ಎಲೆ ಚುಕ್ಕೆ ರೋಗದಿಂದ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಅಡಕೆಗೆ (Adike) ಟಾಸ್ಕ್ ಫೋರ್ಸ್ ಇದ್ದರು ಸರ್ಕಾರ ಎಲೆ ಚುಕ್ಕೆ ರೋಗದ ಕುರಿತು ಸಮರ್ಪಕವಾಗಿ ಕ್ರಮ ಕೈಗೊಂಡಿಲ್ಲ. ಟಾಸ್ಕ್ ಫೋರ್ಸ್ ಅಧ್ಯಕ್ಷರು ಅಡಕೆ ಬೆಳೆಗಾರರ ರಕ್ಷಣೆಗೆ ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕಿದೆ. ಗುಟ್ಕಾ ಲಾಬಿಗೆ ಮಣಿದು ಅಡಕೆ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು. ಆಮದು ಮಾಡಿಕೊಳ್ಳುವ ಅಗತ್ಯವಿದ್ದರೆ ವಿದೇಶಿ ಅಡಕೆಗೆ ಹೆಚ್ಚಿನ ತೆರಿಗೆ ವಿಧಿಸಬೇಕು ಎಂದು ಭಾಸ್ಕರ್ ರಾವ್ ಆಗ್ರಹಿಸಿದರು.
ತಾಳಗುಪ್ಪ – ಹೊನ್ನಾವರ ಲಿಂಕ್ ಮಾಡಿ
ತಾಳಗುಪ್ಪ – ಹೊನ್ನಾವರ ನಡುವೆ 80 ಕಿ.ಮೀ ಇದೆ. ರೈಲ್ವೆ (Railway) ಯೋಜನೆ ರೂಪಿಸಿದರೆ ಶಿವಮೊಗ್ಗ ಮತ್ತಷ್ಟು ಬೆಳೆವಣಿಗೆ ಕಾಣಲಿದೆ. ಡಬಲ್ ಇಂಜಿನ್ ಸರ್ಕಾರ ಇದ್ದರು ಈ ಯೋಜನೆ ರೂಪಿಸುವಲ್ಲಿ ವಿಳಂಬ ಧೋರಣೆ ಸರಿಯಲ್ಲ ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಸಿಟಿ ಬಸ್ಸುಗಳಿಗೆ ಬಿಸಿ ಮುಟ್ಟಿಸಿದ ಪೊಲೀಸ್, ಭಾರಿ ವಾಹನಗಳ ಸಂಚಾರ ನಿರ್ಬಂಧ ಇವತ್ತಿಂದ ಜಾರಿ
ಎಎಪಿ ನಾಯಕಿ ನೇತ್ರಾವತಿ, ರವಿಕುಮಾರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿ ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422