ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 10 ನವೆಂಬರ್ 2019
ನಾನು ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗಬೇಕು ಅಂದುಕೊಂಡಿದ್ದೇನೆ ಹೀಗಂತ ಹೇಳುವ ಮೂಲಕ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.
ಶಿವಮೊಗ್ಗ ತಿರುಪತಿ ರೈಲಿಗೆ ಚಾಲನೆ ನೀಡುವ ಮುನ್ನ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಸಿಎಂ ಆಗುವುದಾಗಿ ಹೇಳಿದರು.
ಸಂಸದ ಬಿ.ವೈ.ರಾಘವೇಂದ್ರ ಚುರುಕಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸಂಸದರಾಗಿಯೇ ಉಳಿಯಬೇಕು. ರಾಜ್ಯದ ಕಡೆಗೆ ಬರುವುದು ಬೇಡ. ಯಾಕೆಂದರೆ ತಾವು ಮುಂದಿನ ಮುಖ್ಯಮಂತ್ರಿ ಆಗಬೇಕು ಅಂದುಕೊಂಡಿರುವುದಾಗಿ ತಿಳಿಸಿ ಸಭೆಯನ್ನು ನಗೆಗಡಲಲ್ಲಿ ತೇಲುವಂತೆ ಮಾಡಿದರು.
‘ನೆಮ್ಮದಿಯಾಗಿ ಆಳೋಕೆ ಬಿಡಿ’
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ನೆಮ್ಮದಿಯಾಗಿ ಆಳೋಕೆ ಬಿಡಬೇಕು ಅಂತಾ ಆಯನೂರು ಮಂಜುನಾಥ್ ಹೇಳಿದ್ದಾರೆ. ಅವರು ನಮ್ಮದಿಯಾಗಿ ಆಡಳಿತ ನಡೆಸಲು ಅವಕಾಶ ನೀಡಿದರೆ ರಾಜ್ಯದಲ್ಲಿ ಶಿವಮೊಗ್ಗ ನಂಬರ್ 1 ಆಗಲಿದೆ ಎಂದರು.
ಈ ನಡುವೆ ಯಡಿಯೂರಪ್ಪ ಅವರು ಹೋರಿ, ರಾಘವೇಂದ್ರ ಅವರನ್ನು ಕರು ಎಂದು ಅವರು ಬಣ್ಣಿಸಿದರು. ಅಭಿವೃದ್ಧಿ ವಿಚಾರದಲ್ಲಿ ಅಪ್ಪ, ಮಗ ಮುಂಚೂಣಿಗೆ ನಿಲ್ಲುತ್ತಾರೆ ಎಂದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422