ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 16 JULY 2023
SHIMOGA : ಬಿಟ್ಟು ಬಂದವರನ್ನೆ ಮತ್ತೆ ಅಪ್ಪಿಕೊಳ್ಳಬೇಕಾದ ಪರಿಸ್ಥಿತಿ ಬರಬಹುದು. ಮುಂದಿನ ದಿನಗಳಲ್ಲಿ ಯಾವ ರೀತಿಯ ಹೊಂದಾಣಿಕೆಯಾಗುತ್ತದೆಯೊ ಗೊತ್ತಿಲ್ಲ. ಈಗಲೆ ಮಾನಸಿಕವಾಗಿ ಸಿದ್ಧತೆ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹೇಳಿಕೆ ನೀಡಿ ಕುತೂಹಲ (Curiosity) ಮೂಡಿಸಿದ್ದಾರೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ಶಿವಮೊಗ್ಗದಲ್ಲಿ ನೂತನ ಶಾಸಕಿಗೆ ಅಭಿನಂದನೆ, ಕಾರ್ಯಕ್ರಮದಲ್ಲಿ ಯಾರೆಲ್ಲ ಏನೇನು ಹೇಳಿದರು?
ಜೆಡಿಎಸ್ ಕಚೇರಿಯಲ್ಲಿ ಶಾಸಕಿ ಶಾರದಾ ಪೂರ್ಯಾನಾಯ್ಕ್ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಆಯನೂರು ಮಂಜುನಾಥ್, ಜು.18ರ ನಂತರ ದೇಶದ ರಾಜಕೀಯ ಚಿತ್ರಣ ಬದಲಾಗುವ ಬೆಳವಣಿಗೆ ನಡೆಯಲಿದೆ ಎಂದರು.
ನಾವು ಈವರೆಗೆ ಯಾರನ್ನು ವಿರೋಧಿಸುತ್ತಿದ್ದೆವೊ ಅವರನ್ನು ವಿರೋಧಿಸದಿರುವಂತ ಪರಿಸ್ಥಿತಿ ಬಾರದಿರಲಿ. ನಾವು ಬಿಟ್ಟು ಬಂದವರ ಕಡೆಗೆ ನಮ್ಮ ನಾಯಕರು ಹೋದರೆ ಅನುಭವಿಸುವ ಹಿಂಸೆ ದೇವರಿಗೆ ಗೊತ್ತಾಗಬೇಕು. ಆದರೆ ರಾಜಕೀಯದಲ್ಲಿ ಸ್ಥಿತ್ಯಂತರಗಳು ಸಹಜ ಎಂದು ಜೆಡಿಎಸ್ ಪಕ್ಷದ ಮುಂದಿನ ನಡೆಯ ಕುರಿತು ಕುತೂಹಲ (Curiosity) ಮೂಡಿಸಿದರು.