ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಕಾಂಗ್ರೆಸ್ (Congress Party) ಸೇರ್ಪಡೆಯಾಗಲಿದ್ದಾರೆ. ಈ ಕುರಿತು ಗಂಭೀರ ಚರ್ಚೆಗಳು ನಡೆಯುತ್ತಿದೆ. ಇನ್ನೊಂದೆಡೆ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಆಯನೂರು ಮಂಜುನಾಥ್ ಭೇಟಿಯಾಗಿದ್ದು, ಫೋಟೊ ವೈರಲ್ (Photo Viral) ಆಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಅವರ ಮನೆಗೆ ಆಯನೂರು ಮಂಜುನಾಥ್ ಭೇಟಿ ನೀಡಿದ್ದು, ಹೂಗುಚ್ಛ ನೀಡಿದ್ದಾರೆ. ಅದರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಕಾಂಗ್ರೆಸ್‌ನತ್ತ ಆಯನೂರು ದೃಷ್ಟಿ
ವಿಧಾನ ಪರಿಷತ್ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಕಳೆದ ವಿಧಾನಸಭೆ ಚುನಾವಣೆ ಹೊತ್ತಿಗೆ ರಾಜೀನಾಮೆ ನೀಡಿದ್ದರು. ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ 8,863 ಮತ ಪಡೆದಿದ್ದರು. ಈಗ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿತ್ತು.
ಇದನ್ನೂ ಓದಿ – ಶಿವಮೊಗ್ಗ ಕಾಂಗ್ರೆಸ್ ಕಚೇರಿ ಈಗ ಫುಲ್ ರಶ್, ಸರ್ಕಾರ ರಚನೆ ಬೆನ್ನಿಗೆ ಶುರುವಾಯ್ತು 3 ಚಾಲೆಂಜ್, ಏನೇನು?
ಆಯನೂರು ಮಂಜುನಾಥ್ ಪಕ್ಷ ಸೇರ್ಪಡೆಗೆ ಕಾಂಗ್ರೆಸ್‌ನಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆ ಅಭ್ಯರ್ಥಿಯಾಗಿದ್ದ ಹೆಚ್.ಸಿ.ಯೋಗೇಶ್ ಪತ್ರಿಕಾಗೋಷ್ಠಿ ನಡಸಿ ತಮ್ಮ ಅಸಮಾಧಾನ ಹೊರಹಾಕಿದ್ದರು.
ಇದನ್ನೂ ಓದಿ – ‘ಚಳಿಗಾಲದಲ್ಲಿ ಬಿಜೆಪಿ, ಬೇಸಿಗೆಯಲ್ಲಿ ಜೆಡಿಎಸ್, ಮಳೆಗಾಲದಲ್ಲಿ ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆ’, ಆಯನೂರು ವಿರುದ್ಧ ಗರಂ