
ಶಿವಮೊಗ್ಗ ಲೈವ್.ಕಾಂ | SHIMOGA | 19 ಫೆಬ್ರವರಿ 2020
ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದಿದ್ದರೆ ಸ್ವಾಗತಿಸುತ್ತೇನೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧು ಬಂಗಾರಪ್ಪ ಅವರು ಪಕ್ಷಕ್ಕೆ ಸೇರ್ಪಡೆಯಾಗುವುದಿದ್ದರೆ ಸ್ವಾಗತ. ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರ ರಾಜ್ಯ ಸಮಿತಿಗೆ ಬಿಟ್ಟಿದ್ದು ಎಂದರು.
ಇದು ಬಗರ್’ಹುಕುಂ ಸರ್ಕಾರ
ಬಗರ್‌ಹುಕುಂ ಮೂಲಕ ಭೂಮಿ ಅತಿಕ್ರಮಣ ಮಾಡಿಕೊಂಡಂತೆ ಬಿಜೆಪಿಯವರು ಅಧಿಕಾರ ಅತಿಕ್ರಮಿಸಿದ್ದಾರೆ ಎಂದು ಕಿಮ್ಮನೆ ರತ್ನಾಕರ್ ವ್ಯಂಗ್ಯವಾಡಿದರು.
ನಾವು ಶಾಸಕರಾಗಿರುವುದೇ ಸಚಿವರಾಗಲು ಎಂದು ಕೆಲವರು ಭಾವಿಸಿದ್ದಾರೆ. ಜಾತಿಗೆ ಇಷ್ಟು ಎಂದು ಸಚಿವ ಸ್ಥಾನ ಕೇಳುತ್ತಿದ್ದಾರೆ. ಎಲ್ಲ ಪ್ರಬಲ ಜಾತಿಗೂ ಸಚಿವ ಸ್ಥಾನ ಹಂಚಿಕೆಯಾದರೆ ಕಡಿಮೆ ಜನಸಂಖ್ಯೆ ಇರುವ ಸಮುದಾಯಕ್ಕೆ ಅಧಿಕಾರ ಸಿಗುವುದಾದರೂ ಹೇಗೆ? ಇದೆಲ್ಲವೂ ಸಾರ್ವಜನಿಕವಾಗಿ ಚರ್ಚಿಯೇ ಆಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ವಿರುದ್ದ ಮಾತನಾಡುವ ಬಿಜೆಪಿ ನಾಯಕರ ಬಗ್ಗೆ ದೊಡ್ಡ ಸುದ್ದಿಗಳು ಮಾಧ್ಯಮಗಳಲ್ಲಿ ಪ್ರಕಟವಾಗುತ್ತವೆ. ಆದರೆ ಅದನ್ನು ವಿರೋಧಿಸುವ ಕಾಂಗ್ರೆಸ್ ಮತ್ತಿತರ ಪಕ್ಷಗಳ ಮುಖಂಡರ ಹೇಳಿಕೆಗಳು ಸಣ್ಣ ಪ್ರಮಾಣದಲ್ಲಿ ಪ್ರಕಟಗೊಳ್ಳುತ್ತವೆ ಎಂದು ಪರೋಕ್ಷವಾಗಿ ಮಾಧ್ಯಮಗಳ ವಿರುದ್ಧ ಅಸಮಾಧಾನ ಹೊರಹಾಕಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200