ಶಿವಮೊಗ್ಗ: ನಾನೇನು ಸನ್ಯಾಸಿಯಲ್ಲ. ನನ್ನ ಹಕ್ಕು ಕೇಳುತ್ತಿದ್ದೇನೆ. ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಪರಿಹಾರ ಮಾಡುವುದರ ಜೊತೆಗೆ ಹೊಸಬರಿಗೆ ಸಚಿವ ಸ್ಥಾನ ನೀಡುವ ವಿಚಾರವನ್ನು ಹೈಕಮಾಂಡ್ ಶೀಘ್ರ ಬಗೆಹರಿಸಬೇಕು ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಶಿವಮೊಗ್ಗ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಸಚಿವ ಸ್ಥಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ನಾಯಕರಿಗೆ ಕೇಳಿದ್ದೇನೆ. ಪ್ರಬಲ ಆಕಾಂಕ್ಷಿ ಎಂಬುದನ್ನ ಮನದಟ್ಟು ಮಾಡಿದ್ದೇನೆ.
‘ನಾನು ಹೈಕಮಾಂಡ್ ಬಣʼ
ಮುಖ್ಯಮಂತ್ರಿ ಬದಲಾವಣೆ ವಿಚಾರ ರಾಜ್ಯದಲ್ಲಿ ಗೊಂದಲ ಮೂಡಿಸಿದೆ. ಇದರಿಂದ ಪಕ್ಷಕ್ಕು ಹಾನಿಯಾಗಿದೆ. ಕೇಂದ್ರದ ನಾಯಕರೆ ಈ ಸಮಸ್ಯೆ ಪರಿಹರಿಸಬೇಕು. ಇನ್ನು, ಸಹಿ ಸಂಗ್ರಹ ವಿಚಾರದಲ್ಲಿ ತಮ್ಮನ್ನು ಯಾರೂ ಸಂಪರ್ಕ ಮಾಡಿಲ್ಲ. ನಾನು ಯಾವುದೇ ಬಣದಲ್ಲಿ ಗುರುತಿಸಿಕೊಂಡಿಲ್ಲ. ನಾನು ಕಾಂಗ್ರೆಸ್ ಪಕ್ಷದ ನಿಜವಾದ ಬಣದಲ್ಲಿ ಇದ್ದೇನೆ. ನನ್ನದು ಹೈಕಮಾಂಡ್ ಬಣ ಎಂದರು.

‘ಕೊಡೋದು ಬಿಡೋಡು ಹೈಕಮಾಂಡ್‌ಗೆ ಬಿಟ್ಟಿದ್ದು’
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎಂದು ಕೇಳಿದ್ದಾರೆ. ಜಿ.ಪರಮೇಶ್ವರ ಅವರು ಸಿಎಂ ಸ್ಥಾನ ಕೇಳಿದ್ದಾರೆ. ಆದರೆ ಸಿಎಂ ಸ್ಥಾನ ಕೊಡುವುದು ಬಿಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ. ರಾಷ್ಟ್ರೀಯ ನಾಯಕರು ತೀರ್ಮಾನಿಸಿದರೆ ಸಿಎಂ ಸಹ ಬದಲಾಗಬಹುದು, ಮಂತ್ರಿಗಳು ಕೂಡ ಬದಲಾಗಬಹುದು ಎಂದರು.
ಇದನ್ನೂ ಓದಿ » ಮಲೆನಾಡು ಶಾಸಕರಿಂದ ವಿಧಾನಸಭೆ ಸ್ಪೀಕರ್‌ಗೆ ಪತ್ರ, ಏನಿದೆ ಪತ್ರದಲ್ಲಿ? ಎಂಎಲ್‌ಎ ಹೇಳಿದ್ದೇನು?
ಈ ಸಂದರ್ಭ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ಡಿಸಿಸಿ ಬ್ಯಾಂಕ್ ರಾಜ್ಯ ನಿರ್ದೇಶಕ ಎಂ.ಶ್ರೀಕಾಂತ್ ಇದ್ದರು.
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





