ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2020
ರಾಜ್ಯದಲ್ಲಿ ಕರೋನಾ ಸೋಂಕು ಹರಡುತ್ತಿರುವುದರಿಂದ ಗ್ರಾಮ ಪಂಚಾಯತ್ ಚುನಾವಣೆ ಮುಂದೂಡಿದರೆ ಒಳ್ಳೆಯದು. ಆದರೆ ಹೈಕೋರ್ಟ್ ಮತ್ತು ಚುನಾವಣಾ ಆಯೋಗದ ಸೂಚನೆ ಪಾಲಿಸಲು ಬದ್ಧ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಈಶ್ವರಪ್ಪ, ಒಂದೆಡೆ ಕರೋನಾ ಸೋಂಕು ಇರುವುದರಿಂದ ಶಾಲೆಗಳನ್ನು ಆರಂಭಿಸುವುದು ಬೇಡ ಎಂಬ ಅಭಿಪ್ರಾಯ ಇದೆ. ಅದೇ ರೀತಿ ಗ್ರಾಪಂ ಚುನಾವಣೆ ನಡೆಸಿದರೂ ಸೋಂಕು ಹೆಚ್ಚಳದ ಆತಂಕ ಇದೆ. ಹಾಗಾಗಿ ಸ್ವಲ್ಪ ಕಾಲ ಮುಂದೂಡಿದರೆ ಒಳ್ಳೆಯದು ಎಂಬ ಅಭಿಪ್ರಾಯ ಎಲ್ಲರದ್ದು ಆಗಿದೆ ಎಂದರು.
ರಾಜ್ಯದ 6021 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಸಿದರೆ ಕರೋನಾ ಸೋಂಕು ಹೆಚ್ಚಳ ಆಗಬಹುದು ಎಂಬ ಆತಂಕ ಗ್ರಾಮೀಣ ಪ್ರದೇಶಗಳಲ್ಲಿ ಇದೆ. ಬಿಜೆಪಿ ಮಾತ್ರವಲ್ಲದೆ, ಜೆಡಿಎಸ್ ಮತ್ತು ಕಾಂಗ್ರೆಸ್ ಕೂಡ ಇದನ್ನೇ ಹೇಳಿವೆ. ಇದನ್ನು ಹೊರತುಪಡಿಸಿ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಈಗಾಗಲೇ ಸಿದ್ಧತೆ ಮಾಡಿಕೊಂಡಿದೆ. ಈ ಸಂಬಂಧ ಚುನಾವಣಾ ಆಯೋಗ ಮತ್ತು ಹೈಕೋರ್ಟ್ ನೀಡುವ ಸೂಚನೆ ಪಾಲಿಸಲಾಗುವುದು ಎಂದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422