ಬಿಜೆಪಿಯಿಂದ ರಾಜ್ಯಾದ್ಯಂತ ತಿರಂಗ ಯಾತ್ರೆ, ಏನಿದು ಯಾತ್ರೆ? ಎಲ್ಲೆಲ್ಲಿ ಯಾವಾಗ ನಡೆಯುತ್ತೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ: ಯೋಧರಿಗೆ ಆತ್ಮಸ್ಥೈರ್ಯ ತುಂಬಲು ಬಿಜೆಪಿಯಿಂದ ತಿರಂಗ ಯಾತ್ರೆ (Tiranga Yatra) ಆಯೋಜಿಸಲಾಗಿದೆ. ಮೇ 14ರಿಂದ ಯಾತ್ರೆ ಆರಂಭವಾಗಲಿದೆ. ಜಿಲ್ಲೆ ಮತ್ತು ತಾಲೂಕು ಮಟ್ಟದಲ್ಲಿ ಯಾತ್ರೆ ನಡೆಯಲಿದ್ದು, ಸಾವಿರಾರು ಜನರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
➤ ಸುದ್ದಿಯ ಮುಂದಿನ 7 ಪ್ಯಾರಾಗಳು ಕೆಳಗಿವೆ.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯೇಂದ್ರ, ಮೇ 14ರಂದು ಬೆಂಗಳೂರಿನಲ್ಲಿ ತಿರಂಗ ಯಾತ್ರೆ ಆರಂಭವಾಗಲಿದೆ ಎಂದರು.

SLV-BOOK-SHOP-SHIMOGA

ಮೇ 15ರಂದು ಮಂಗಳೂರು, ಬೆಳಗಾವಿ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ನಡೆಯಲಿದೆ. ಮೇ 16ರಂದು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ಮೇ 18 ರಿಂದ 23ರವರಗೆ ತಾಲೂಕು ಕೇಂದ್ರಗಳಲ್ಲಿ ಯಾತ್ರೆ ನಡೆಯಲಿದೆ. ನಿವೃತ್ತ ಯೋಧರು, ಅವರ ಕುಟುಂಬದವರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನರನ್ನು ತೊಡಗಿಸಿಕೊಳ್ಳಲಾಗುತ್ತದೆ. ಈ ಯಾತ್ರೆ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಯೋಜನೆ ರೂಪಿಸಿದೆ ಎಂದು ತಿಳಿಸಿದರು.  

BJP-President-BY-Vijayendra-Press-meet-in-shimoga.

ದೇಶದ ಯೋಧರಿಗೆ ನೈತಿಕ ಸ್ಥೈರ್ಯ ತುಂಬುವ ಕೆಲಸ ಇದಾಗಿದೆ. ತಿರಂಗ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಭಾಗವಹಿಸಲಿದ್ದಾರೆ. ಮೇ 16ರಂದು ಶಿವಮೊಗ್ಗದಲ್ಲಿ ನಡೆಯುವ ತಿರಂಗ ಯಾತ್ರೆಯಲ್ಲಿ ನಾನು ಭಾಗವಹಿಸಲಿದ್ದೇನೆ ಎಂದು ವಿಜಯೇಂದ್ರ ತಿಳಿಸಿದರು.

ಕದನ ವಿರಾಮ ಶಾಶ್ವತ ಅಲ್ಲ. ಪಾಕಿಸ್ತಾನದ ಕಡೆಯಿಂದ ಸಣ್ಣದಾಗಿ ಉಗ್ರ ಚುಟುವಟಿಕೆ ನಡೆದರು ಅದನ್ನು ಯುದ್ಧ ಎಂದು ಪರಿಗಣಿಸಲಾಗುತ್ತದೆ. ಪ್ರಧಾನಿ ಮೋದಿ ಅಮೆರಿಕಾಗೆ ಶರಣಾಗಿದ್ದಾರೆ ಎಂದು ಕಾಂಗ್ರೆಸಿಗರು ಆರೋಪಿಸುತ್ತಿದ್ದಾರೆ. ಅದರೆ ಅದು ರಾಜತಾಂತ್ರಿಕ ನಡೆ.ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

JNNCE-ADMISSION-2025-26

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್‌, ವಿಧಾನ ಪರಿಷತ್‌ ಮಾಜಿ ಸದಸ್ಯ ಎಸ್.ರುದ್ರೇಗೌಡ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ,  ಚಂದ್ರಶೇಖರ್‌, ವಿಕ್ರಮ್‌ ಇದ್ದರು.

ಇದನ್ನೂ ಓದಿ ಶಿವಮೊಗ್ಗದಲ್ಲಿ ಪಾಕಿಸ್ತಾನದ ಪರ ವಾಟ್ಸಪ್ ಸ್ಟೇಟಸ್, ಬಿಜೆಪಿ ಆಕ್ರೋಶ, ಎಂಎಲ್‌ಎ ಗರಂ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment