ಶಿವಮೊಗ್ಗ: ಮಲೆನಾಡು ಹಾಗೂ ಕರಾವಳಿ ಭಾಗದ ರೈತರು ಮತ್ತು ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ವಾಸ್ತವಿಕ ಪರಿಸ್ಥಿತಿಯನ್ನು ಅರಿತು, ಕಸ್ತೂರಿ ರಂಗನ್ ಹಾಗೂ ಮಾಧವ ಗಾಡ್ಗೀಳ್ ವರದಿಗಳಲ್ಲಿರುವ ಲೋಪ ಹಾಗೂ ಸಾಧಕ-ಬಾಧಕಗಳ ಮೇಲೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ ಬಿಜೆಪಿಯಿಂದ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ತೀರ್ಮಾನಿಸಲಾಗಿದೆ. ಸುದ್ದಿಯ ಮುಂದಿನ 8 ಪ್ಯಾರಾಗಳು ಕೆಳಗಿವೆ.

ನಗರದ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಿವಮೊಗ್ಗ ವಿಭಾಗದಿಂದ ಆಯೋಜಿಸಿದ್ದ ‘ಕಸ್ತೂರಿ ರಂಗನ್ ವರದಿ’ ಕುರಿತು ಚುನಾಯಿತ ಪ್ರತಿನಿಧಿಗಳು ಹಾಗೂ ಪಕ್ಷದ ಪ್ರಮುಖರ ವಿಶೇಷ ಸಭೆಯಲ್ಲಿ ಈ ಕುರಿತು ವಿಸ್ತೃತ ಚರ್ಚೆ ನಡೆಸಲಾಯಿತು.
##ಸಭೆಯಲ್ಲಿ ಏನೆಲ್ಲ ಚರ್ಚೆಯಾಯ್ತು?

ಕಸ್ತೂರಿ ರಂಗನ್ ವರದಿಯ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದು, ಅದಕ್ಕೆ ರಾಜಕೀಯವಾಗಿ ಉತ್ತರ ನೀಡಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಪಶ್ಚಿಮಘಟ್ಟ ವ್ಯಾಪ್ತಿಯಲ್ಲಿರುವ ಜನರು ವರದಿಯಿಂದ ಆತಂಕದಲ್ಲಿದ್ದು, ಅವರ ಅಳಲನ್ನು ಆಲಿಸಲು ಅಂತಹ ಗ್ರಾಮಗಳಿಗೆ ಪಕ್ಷದಿಂದ ಭೇಟಿ ನೀಡಲಾಗುವುದು. ಪರಿಸರ ಮತ್ತು ಜನರ ಬದುಕು ಎರಡರ ಬಗ್ಗೆಯೂ ಯೋಚಿಸಿ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ನಿರ್ಧಾರಕ್ಕೆ ಬರಲಾಗುವುದು.

ವರದಿ ನೀಡಿದಾಗಿನ ಸ್ಥಿತಿಗೂ ಈಗಿನದ್ದಕ್ಕೂ ವ್ಯತ್ಯಾಸವಿದ್ದು, ರಾಜ್ಯ ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳೇನು ಎಂಬ ನಿಟ್ಟಿನಲ್ಲಿ ಸಲಹೆಗಳನ್ನು ನೀಡುವುದು ಸೇರಿ ಹತ್ತು ಹಲವು ತೀರ್ಮಾನಗಳನ್ನು ಕೈಗೊಳ್ಳಲಾಯಿತು. ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಯಿಂದ ಆಗಮಿಸಿದ್ದ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ತಮ್ಮ ಸಲಹೆಗಳನ್ನು ನೀಡಿದರು.

ಈಗಾಗಲೇ ಕೇಂದ್ರ ಸಮಿತಿ ರಚಿಸಿದ್ದು, ಅದು ಸ್ಥಳ ಪರಿಶೀಲನೆಗೆ ಆಗಮಿಸಲಿದ್ದು, ಆ ಸಂದರ್ಭ ಮನವರಿಕೆಯಾಗುವ ಮಾಹಿತಿಯನ್ನು ನೀಡುವ ದೊಡ್ಡ ಜವಾಬ್ದಾರಿಯಿದೆ. ಅಲ್ಲದೆ, ರಾಜ್ಯ ಸರ್ಕಾರ ಕೇರಳ ಮಾದರಿಯಲ್ಲಿ ಸ್ಪಷ್ಟ ವರದಿಯನ್ನು ಕೇಂದ್ರಕ್ಕೆ ಸಲ್ಲಿಸಬೇಕಿದ್ದು, ಇದರ ಬಗ್ಗೆಯೂ ಒತ್ತಡ ಹೇರುವ ವಿಚಾರವಾಗಿ ನಿರ್ಧರಿಸಲಾಯಿತು.
ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿ ಸಿದಂತೆ ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದ್ದು, ಈ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯುವುದಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಿಜೆಪಿಯ ಅದರಲ್ಲೂ ಮಲೆನಾಡು, ಕರಾವಳಿ ಭಾಗದ ಜನಪ್ರತಿನಿಧಿಗಳು ಕರಡು ಅಧಿಸೂಚನೆಯನ್ನು ವಿರೋಧಿಸುತ್ತೇವೆ.
– ವಿಶ್ವೇಶ್ವರ ಹೆಗಡೆ ಕಾಗೇರಿ, ಸಂಸದ
ವರದಿಯನ್ನು ಸಾರಾಸಗಟಾಗಿ ಬೇಡ ಎನ್ನುವುದಕ್ಕಿಂತ ಅದರಲ್ಲಿನ ಅಂಶಗಳನ್ನು ಗಮನಿಸ ಬೇಕು. ಪಶ್ಚಿಮಘಟ್ಟದೆಡೆಗೆ ಅಸಡ್ಡೆಯೂ ಸರಿಯಲ್ಲ. ಪ್ರಕೃತಿ ವರ್ಷದಿಂದ ವರ್ಷಕ್ಕೆ ಉಗ್ರ ಸ್ವರೂಪ ತಾಳುತ್ತಿದೆ. ವಯನಾಡು, ನೇಪಾಳದ ಘಟನೆಗಳೇ ಇದಕ್ಕೆ ಸಾಕ್ಷಿಯಾಗಿವೆ. ಜನರಿಗೆ ಸಮಸ್ಯೆಯಾಗದಂತೆ ಪರಿಸರಕ್ಕೂ ಮಾರಕವಾಗದ ರೀತಿಯಲ್ಲಿ ನಿರ್ಧಾರ ಕೈಗೊಳ್ಳುವುದು ಉತ್ತಮ.
– ಬಿ.ಎಂ. ಕುಮಾರಸ್ವಾಮಿ, ಪರಿಸರ ಆಸಕ್ತರು, ಶಿವಮೊಗ್ಗ
ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಭಾಗದ ಪ್ರಭಾರಿ ಆರ್.ಕೆ. ಸಿದ್ದರಾಮಣ್ಣ, ಸಂಸದರಾದ ಬಿ.ವೈ. ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಆರಗ ಜ್ಞಾನೇಂದ್ರ, ಸಿ.ಟಿ. ರವಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.