ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 8 APRIL 2023
SHIMOGA : ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೊದಲ ಸಭೆಯಲ್ಲೇ ಶೇ.80ರಷ್ಟು ಅಭ್ಯರ್ಥಿಗಳ ಆಯ್ಕೆ ಪೂರ್ಣಗೊಂಡಿದೆ. ಸೋಷಿಯಲ್ ಇಂಜಿನಿಯರಿಂಗ್ಗೆ (Engineering) ಬಿಜೆಪಿ ಅದ್ಯತೆ ನೀಡಲಿದೆ. ಈ ಹಿನ್ನಲೆಯಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ಉನ್ನತ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಡಾ. ಅಶ್ವಥನಾರಾಯಣ್ ಅವರು ತಿಳಿಸಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಅಶ್ವಥ ನಾರಾಯಣ ಅವರು, ಕೆಲವು ಕ್ಷೇತ್ರಗಳಿಗೆ ಸೂಕ್ಷ್ಮತೆ ಮತ್ತು ಹೆಚ್ಚು ಗಮನ ವಹಿಸಬೇಕಿದೆ. ಆಕಾಂಕ್ಷಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ. ಎಲ್ಲಾ ಜಾತಿ, ಧರ್ಮದವರಿಗು ಟಿಕೆಟ್ ನೀಡಬೇಕಿದೆ. ಈ ಸೋಷಿಯಲ್ ಇಂಜಿನಿಯರಿಂಗ್ (Engineering) ಅನ್ನು ಬಿಜೆಪಿ ಚನ್ನಾಗಿ ನಿರ್ವಹಸಲಿದೆ. ಸದ್ಯದಲ್ಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಇದನ್ನೂ ಓದಿ – ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯ? ಚೆಕ್ ಮಾಡೋದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಕೆಲವು ನಾಯಕರು ತಮ್ಮ ಮಕ್ಕಳಿಗೆ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ, ಪ್ರಜಾಪ್ರಭುತ್ವದಲ್ಲಿ ಟಿಕೆಟ್ ಅಪೇಕ್ಷೆ ಸಹಜ. ಸೂಕ್ತ ಆದವರಿಗೆ ಪಕ್ಷ ಟಿಕೆಟ್ ನೀಡಲಿದೆ. ಸಾಮಾನ್ಯ ಕಾರ್ಯಕರ್ತರಂತೆ ಪಕ್ಷದ ಕೆಲವ ಮಾಡುವ ಎಲ್ಲರಿಗೂ ಟಿಕೆಟ್ ಸಿಗಲಿದೆ ಎಂದರು.
ಮತದಾರರು ಪ್ರಬುದ್ಧರಿದ್ದಾರೆ. ಸಮ್ಮಿಶ್ರ ಸರ್ಕಾರಗಳು ಜನಪರವಾಗಿರಲು ಸಾಧ್ಯವಿಲ್ಲ. ಸುಭದ್ರ ಸರ್ಕಾರ ಇರದಿದ್ದರೆ ಸಮರ್ಪಕ ಆಡಳಿತ ನೀಡಲು ಸಾಧ್ಯವಿಲ್ಲ. ಇದನ್ನು ಗಮನದಲ್ಲಿ ಇರಿಸಿಕೊಂಡು ಜನ ಈ ಬಾರಿ ನಿರ್ಣಯ ಕೈಗೊಳ್ಳಲಿದ್ದಾರೆ ಎಂದರು.
ಇದನ್ನೂ ಓದಿ – ಬಿಜೆಪಿ ಮೊದಲ ಪಟ್ಟಿ, ಶಿವಮೊಗ್ಗದ ಯಾವೆಲ್ಲ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆಯಾಗುತ್ತೆ? ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422