SHIVAMOGGA LIVE NEWS | 26 APRIL 2023
SHIMOGA : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಏ.28ರಂದು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ಆಗಮಿಸುತ್ತಿದ್ದಾರೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ವಿವಿಧೆಡೆ ಪ್ರಚಾರ ಮತ್ತು ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಏ.28ರಂದು ಬೆಳಗ್ಗೆ ವಿಶೇಷ ವಿಮಾನದ ಮೂಲಕ ನವದೆಹಲಿಯಿಂದ ಹೊರಟು ಬೆಳಗ್ಗೆ 11.30ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ (Airport) ತಲುಪಲಿದ್ದಾರೆ. ಇಲ್ಲಿಂದ ಹೆಲಿಕಾಪ್ಟರ್ ಮೂಲಕ ಚಿಕ್ಕಮಗಳೂರು ಜಿಲ್ಲೆಯ ವಿವಿಧೆಡೆ ಪ್ರಚಾರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಸೊರಬಕ್ಕೆ ಆಗಮಿಸಲಿದ್ದಾರೆ. ಕುಮಾರ್ ಬಂಗಾರಪ್ಪ ಅವರ ಪರವಾಗಿ ಬಿಜೆಪಿ ಕಚೇರಿ ಬಳಿ ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಮಧ್ಯಾಹ್ನ 3.15ಕ್ಕೆ ಶಿರಾಳಕೊಪ್ಪದ ಮುನಿಸಿಪಲ್ ಗ್ರೌಂಡ್ನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರ ಪರವಾಗಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 6ಕ್ಕೆ ಶಿವಮೊಗ್ಗದ ಹರ್ಷ ಫರ್ನ್ ಹೊಟೇಲ್ನಲ್ಲಿ ಬಿಜೆಪಿ ಪಕ್ಷದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾತ್ರಿ ಅದೇ ಹೊಟೇಲ್ನಲ್ಲಿ ತಂಗಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ನಾಮಪತ್ರ ಹಿಂಪಡೆದ 10 ಅಭ್ಯರ್ಥಿಗಳು, ಯಾವ್ಯಾವ ಕ್ಷೇತ್ರದಲ್ಲಿ ಯಾರೆಲ್ಲ ಕಣದಿಂದ ಹಿಂದೆ ಸರಿದಿದ್ದಾರೆ?