ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 ನವೆಂಬರ್ 2022
SHIMOGA | ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಗರ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಗೋಪಿ ಸರ್ಕಲ್ನಲ್ಲಿ ಮಾನವ ಸರಪಳಿ ನಿರ್ಮಿಸಿ ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಉಪ ಮೇಯರ್ ಸುರೇಖಾ ಮುರಳೀಧರ್ ಅವರು, ಸತೀಶ್ ಜಾರಕಿಹೊಳಿ ಅವರು ಹಿಂದೂ ಧರ್ಮದ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ತಾಕತ್ತಿದ್ದರೆ ಮುಸ್ಲಿಂ, ಕ್ರಿಶ್ಚಿಯನ್ ಧರ್ಮದ ಕುರಿತು ಹೇಳಿಕೆ ನೀಡಲಿ. ಕಾಂಗ್ರೆಸ್ ಪಕ್ಷದವರು ಓಲೈಕೆ ರಾಜಕಾರಣ ಬಿಡಬೇಕು. ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ. ಸತೀಶ್ ಜಾರಕಿಹೊಳಿ ಅವರನ್ನು ಪಕ್ಷದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಬಿಜೆಪಿ ನಗರ ಕಾರ್ಯದರ್ಶಿ ದೀನ ದಯಾಳು ಅವರು ಮಾತನಾಡಿ, ಈ ಪ್ರತಿಭಟನೆ ಕೇವಲ ಸತೀಶ್ ಜಾರಕಿಹೊಳಿ ವಿರುದ್ಧವಲ್ಲ. ಇಡೀ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿಭಟನೆಯಾಗಿದೆ. ದಿನೇಶ್ ಗುಂಡೂರಾವ್ ಅವರು ಜಾರಕಿಹೊಳಿ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ. ಇದು ಮುಸ್ಲಿಮರ ಓಲೈಕೆ. ಸೋನಿಯಾ ಗಾಂಧಿಯವರ ಗಮನ ಸೆಳೆಯಲು ಈ ಪ್ರಯತ್ನ ಎಂದು ಆರೋಪಿಸಿದರು.
ಹಿಂದೂ ಪದದ ಅರ್ಥ ಅಶ್ಲೀಲ ಅಂತಾ ಹೇಳಿದ್ದಾರೆ. ಜಾರಕಿಹೊಳಿಗೆ ಅವರ ಕುಟುಂಬದವರೆ ಚಪ್ಪಲಿಯಲ್ಲಿ ಹೊಡೆಯುವ ಸ್ಥಿತಿ ನಿರ್ಮಾಣ ಆಗಲಿದೆ. ಹಿಂದೂ ಧರ್ಮ, ಸಮಾಜ, ಧ್ವಜದ ವಿಚಾರವಾಗಿ ಅವಹೇಳನಕಾರಿಯಾಗಿ ಮಾತನಾಡಿದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಸತೀಶ್ ಜಾರಕಿಹೊಳಿ ವಿರುದ್ದ ಪ್ರತಿ ನಗರದಲ್ಲೂ ಕೇಸ್ ದಾಖಲಾಗಬೇಕು ಎಂದರು.
ಬಿಜೆಪಿ ನಗರ ಅಧ್ಯಕ್ಷ ಜಗದೀಶ್, ಪಾಲಿಕೆ ಮೇಯರ್ ಶಿವಕುಮಾರ್, ಉಪ ಮೇಯರ್ ಲಕ್ಷ್ಮಿ ಶಂಕರ ನಾಯ್ಕ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಇದನ್ನೂ ಓದಿ | ಒಂದು ವೇಳೆ ಕ್ಷಮೆ ಕೇಳದಿದ್ದರೆ ಚುನಾವಣೆಯಲ್ಲಿ ಹಿಂದುಗಳು ಬುದ್ದಿ ಕಲಿಸುತ್ತಾರ
ADVERTISEMENT
ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422