ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 MAY 2024
SHIMOGA : ನೈಋತ್ಯ ಪದವೀಧರರ (Graduates) ಕ್ಷೇತ್ರ ವ್ಯಾಪ್ತಿಯ ಪದವೀಧರರ ಸಮಸ್ಯೆಗಳನ್ನು ತಿಳಿದುಕೊಂಡಿದ್ದೇನೆ. ಗೆಲುವು ಸಾಧಿಸಿದರೆ ಪದವೀಧರರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆ. ಪಕ್ಷದ ಕಾರ್ಯಕರ್ತರು ತಮ್ಮನ್ನು ಗೆಲ್ಲಿಸುತ್ತಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ಧನಂಜಯ ಸರ್ಜಿ, 10ನೇ ವಯಸ್ಸಿನಿಂದ ಆರ್ಎಸ್ಎಸ್ ಸ್ವಯಂ ಸೇವಕನಾಗಿದ್ದೇನೆ. ವೈದ್ಯ ವೃತ್ತಿಯ ಜೊತೆಗೆ ಸಂಘದ ಜವಾಬ್ದಾರಿಗಳನ್ನು ನಿಭಾಯಿಸಿದ್ದೇನೆ. ವಿಕಾಸ ಟ್ರಸ್ಟ್ನ ಅಧ್ಯಕ್ಷನಾಗಿದ್ದೆ. ಕಳೆದ ಎರಡು ವರ್ಷದಿಂದ ಬಿಜೆಪಿಯಲ್ಲಿ ಸಕ್ರಿಯವಾಗಿದ್ದೇನೆ. ಪಕ್ಷದ ಹಿರಿಯರು ನೈಋತ್ಯ ಪದವೀಧರರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ನೈಋತ್ಯ ಪದವೀಧರರ ಕ್ಷೇತ್ರದಲ್ಲಿ 85 ಸಾವಿರ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಈ ಪೈಕಿ 27 ಸಾವಿರ ಮತದಾರರು ಶಿವಮೊಗ್ಗ ಜಿಲ್ಲೆಯಲ್ಲಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ – ಆಳ್ವಾಸ್ನಲ್ಲಿ ಬೃಹತ್ ಉದ್ಯೋಗ ಮೇಳ, 200ಕ್ಕೂ ಹೆಚ್ಚು ಕಂಪನಿಗಳು ಭಾಗಿ, ಈಗಲೆ ರಿಜಿಸ್ಟರ್ ಮಾಡಿಕೊಳ್ಳಲು ಸೂಚನೆ
ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ರಾಜ್ಯ ಸಂಚಾಲಕ ಎಸ್.ದತ್ತಾತ್ರಿ, ನಗರಾಧ್ಯಕ್ಷ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಲತೇಶ್, ಸೂಡ ಮಾಜಿ ಅಧ್ಯಕ್ಷ ನಾಗರಾಜ್ ಸುದ್ದಿಗೋಷ್ಠಿಯಲ್ಲಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422