ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 31 DECEMBER 2020
ಗೋ ಮಾಂಸ ತಿನ್ನುವವರನ್ನು, ಪಾಕಿಸ್ತಾನಕ್ಕೆ ಜಿಂದಾಬಾದ್ ಹೇಳುವವರನ್ನು, ಹನುಮ ಜಯಂತಿ ದಿನ ಕೋಳಿ ಮಾಂಸ ತಿನ್ನುತ್ತೇನೆ ಎಂದು ಉದ್ದಟತನದಿಂದ ಮಾತನಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜನರು ತಕ್ಕಪಾಠ ಕಲಿಸಿದ್ದಾರೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವುಗಳಿಗೆ ಪೂಜೆ ಮಾಡುವುದು ನಮ್ಮ ಸಂಸ್ಕೃತಿ. ಹನುಮ ಜಯಂತಿ ಮಾಡುತ್ತೇವೆ. ಇಂತಹ ಸಂಸ್ಕೃತಿಗೆ ವಿರುದ್ದವಾಗಿ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ಮಾತನಾಡುತ್ತಿದ್ದಾರೆ. ಅವರು ಏನು ಬೇಕಾದರೂ ತಿನ್ನಲಿ ಆದರೆ ಸಾರ್ವಜನಿಕವಾಗಿ ಹನುಮ ಜಯಂತಿ ದಿನ ನಾನು ನಾಟಿ ಕೋಳಿ ತಿನ್ನುತ್ತೇನೆ ನನ್ನನ್ಯಾರು ಕೇಳುತ್ತಾರೆ ಎಂದು ಹೇಳುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.
ಇದನ್ನೂ ಓದಿ | ಗ್ರಾಮ ಪಂಚಾಯಿತಿ ನೂತನ ಸದಸ್ಯರಿಗೆ ತರಬೇತಿ, ಹೇಗಿರತ್ತೆ? ಏನೆಲ್ಲ ತಿಳಿಸಲಾಗುತ್ತೆ?
ಪಾಕಿಸ್ತಾನ್ ಜಿಂದಾಬಾದ್ ಅಂದರೆ ಕೇಸ್
ಎಸ್‍ಡಿಪಿಐ ಸೇರಿದಂತೆ ಕೆಲವು ಮುಸ್ಲಿಂ ಸಂಘಟನೆಗಳು ಪಾಕಿಸ್ತಾನಕ್ಕೆ ಜಿಂದಾಬಾದ್ ಎಂದು ಕೂಗಿ ರಾಷ್ಟ್ರವಿರೋಧಿ ಚಟುವಟಿಕೆ ನಡೆಸುತ್ತಿವೆ. ಇವರ ವಿರುದ್ದ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಮತ್ತು ಇಂತಹ ಸಂಘಟನೆಗಳ ನಿಷೇಧಕ್ಕೂ ಕೂಡ ಚಿಂತನೆ ನಡೆಸಲಾಗಿದೆ ಎಂದರು.
ಫಲಿತಾಂಶ ಆತ್ಮಸ್ಥೈರ್ಯ ತುಂಬಿದೆ
ಗ್ರಾ.ಪಂ. ಚುನಾವಣೆಯ ಫಲಿತಾಂಶ ಬಿಜೆಪಿಗೆ ಆತ್ಮಸ್ಥೈರ್ಯ ತಂದಿದೆ. ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಈ ಬಾರಿ ವ್ಯವಸ್ಥಿತವಾಗಿ ಚುನಾವಣೆ ನಡೆಸಿ ಶೇ.60ಕ್ಕಿಂತಲೂ ಹೆಚ್ಚು ಗ್ರಾ.ಪಂ. ಸದಸ್ಯರನ್ನು ನಾವು ಹೊಂದಿದ್ದೇವೆ. ಮುಂದಿನ ವಿಧಾನಸಭಾ ಚುನಾವಣೆಗೆ ಇದು ಗಟ್ಟಿಬೇರು ಆಗುತ್ತದೆ ಎಂದರು.


ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಬೊಮ್ಮನಕಟ್ಟೆಯಲ್ಲಿ ನಿರ್ಮಾಣ ಹಂತದ ಮನೆಗೆ ಬೆಳಗ್ಗೆ ಬಂದ ಇಂಜಿನಿಯರ್‌ಗೆ ಕಾದಿತ್ತು ಶಾಕ್, ಆಗಿದ್ದೇನು?

- ದೀವರ ಕ್ಷೇಮಾಭಿವೃದ್ಧಿ ಸಂಘ; ಕಾರ್ಯಕಾರಿ ಸಮಿತಿ ಪುನರ್ ರಚನೆ, ಯಾರಿಗೆ ಯಾವ ಜವಾಬ್ದಾರಿ?

- ಶಿವಮೊಗ್ಗದ ಶಕ್ತಿ ಟೊಯೊಟಾ ಶೋ ರೂಂನಲ್ಲಿ ಕೆಲಸ ಖಾಲಿ ಇದೆ

- ಶಿವಮೊಗದ ಸಿಟಿ ಬಸ್ಸಿನಲ್ಲಿ ಶಿಕ್ಷಕಿಯ ₹4,00,000 ದ ಮಾಂಗಲ್ಯ ಸರ ಕಳ್ಳತನ, ಹೇಗಾಯ್ತು ಘಟನೆ?

- ಶಿವಮೊಗ್ಗದ ಜಿಲ್ಲೆಯ ಮೂವರು ಪೊಲೀಸರಿಗೆ ಮುಖ್ಯಮಂತ್ರಿ ಪದಕ

About The Editor
ನಿತಿನ್ ಆರ್.ಕೈದೊಟ್ಲು
















ಮಾಜಿ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಕಾಮೆಂಟ್ ಹಾಕಿದ ವ್ಯಕ್ತಿಗೆ ಸಂಕಷ್ಟ, ಆಗಿದ್ದೇನು?