ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಆಗಸ್ಟ್ 2021
ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲಿ ಪತ್ತೆ ಹಚ್ಚಲಿದ್ದಾರೆ. ಇನ್ನು, ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರವನ್ನು ದೊಡ್ಡದು ಮಾಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಪೊಲೀಸರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಲಿದ್ದಾರೆ. ಪ್ರಕರಣದ ತನಿಖೆ ವಿಚಾರವಾಗಿ ಮುಖ್ಯಮಂತ್ರಿಗಳು ನಿಗಾ ವಹಿಸಿದ್ದಾರೆ ಎಂದರು.
ಗೃಹ ಸಚಿವರ ಹೇಳಿಕೆ ವಿಚಾರ
ಅತ್ಯಾಚಾರ ಪ್ರಕರಣ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿದ ಮಾಜಿ ಸಿಎಂ ಯಡಿಯೂರಪ್ಪ, ಈ ಹೇಳಿಕೆಯನ್ನು ದೊಡ್ಡದು ಮಾಡುವ ಅಗತ್ಯವಿಲ್ಲ. ಅವರು ಯಾವುದೋ ಸಂದರ್ಭದಲ್ಲಿ ಆ ಮಾತು ಹೇಳಿದ್ದಾರೆ. ಈಗಾಗಲೇ ಈ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ಹಾಗಾಗಿ ಅದನ್ನು ಮುಂದುವರೆಸುವುದು ಬೇಡ. ಗೃಹ ಸಚಿವರಾಗಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.
ಗಣಪತಿ ಹಬ್ಬದ ಬಗ್ಗೆ
ಇನ್ನು, ಗಣೇಶ ಹಬ್ಬ ಆಚರಣೆ ಕುರಿತು ಮಾತನಾಡಿದ ಯಡಿಯೂರಪ್ಪ, ಅಕ್ಕಪಕ್ಕದ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿವೆ. ಈ ಹಂತದಲ್ಲಿ ವೈಭವದಿಂದ ಗಣೇಶ ಹಬ್ಬ ಆಚರಣೆ ಮಾಡುವುದು ಸರಿಯಲ್ಲ. ಸರಳವಾಗಿ ಆಚರಣೆ ಮಾಡಬೇಕು. ಈ ಬಗ್ಗೆ ನಮ್ಮ ಸರ್ಕಾರ ಚರ್ಚೆ ನಡೆಸಿ ತೀರ್ಮಾನಿಸಲಿದೆ ಎಂದರು.
ರಾಜ್ಯಾದ್ಯಂತ ಪ್ರವಾಸಕ್ಕೆ ಪ್ಲಾನ್
ಬಹಳ ದಿನಗಳ ಬಳಿಕ ಶಿವಮೊಗ್ಗಕ್ಕೆ ಆಗಮಿಸಿದ್ದೇನೆ. ಕೆಲ ದಿನ ಇಲ್ಲಿರುತ್ತೇನೆ. ಕಾರ್ಯಕರ್ತರು ಬಹಳ ಉತ್ಸಾಹದಲ್ಲಿದ್ದಾರೆ. ನಾನು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳುತ್ತಿದ್ದೇನೆ. ಮುಂದಿನ ಒಂದೂವರೆ ವರ್ಷ ಪಕ್ಷ ಸಂಘಟನೆಗೆ ಓಡಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 140 ರಿಂದ 150 ಸ್ಥಾನಗಳನ್ನು ಗಳಿಸಬೇಕು. ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕಿದೆ ಎಂದು ತಿಳಿಸಿದರು.
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಪದ್ಮನಾಭ ಭಟ್ ಸೇರಿದಂತೆ ಹಲವರು ಈ ವೇಳೆ ಇದ್ದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422