‘ರೈತರ ದಾರಿ ತಪ್ಪಿಸಲಾಗುತ್ತಿದೆ, ಬೆಂಬಲ ಬೆಲ ಇಲ್ಲ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

127112669 1012323639247546 5792079912860954992 o.jpg? nc cat=105&ccb=2& nc sid=730e14& nc ohc=DI4omhxw3VgAX88vbDT& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ |SHIMOGA NEWS | 8 DECEMBER 2020

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ಪರ ಕಾಯ್ದೆಗಳನ್ನು ವಿರೋಧಿಸಿ ಬಂದ್ ಮಾಡುತ್ತಿರುವವರು ನಿಜ ರೈತರಲ್ಲ. ಮುಖವಾಡ ಹೊತ್ತವರು. ಇದೊಂದು ರಾಜಕೀಯ ಕುತಂತ್ರ. ರೈತರನ್ನು ದಾರಿ ತಪ್ಪಿಸಲಾಗುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕೇಂದ್ರ ಸರ್ಕಾರ ರೈತರ ಮತ್ತು ಕೃಷಿ ಸುಧಾರಣೆಗಾಗಿಯೇ ರೈತ ಉತ್ಪನ್ನ, ವ್ಯಾಪಾರ ಮತ್ತು ವಾಣಿಜ್ಯ, ರೈತರ ಬೆಳೆಗಳಿಗೆ ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ, ಅಗತ್ಯ ಸರಕುಗಳ ತಿದ್ದುಪಡಿ ಮಸೂದೆ ಜಾರಿಗೆ ತಂದಿದೆ. ಇದೆಲ್ಲ ರೈತ ಪರವಾಗಿವೆ ಎಂದರು.

ವಾಮಪಂಥೀಯರು ಮಾತ್ರ ಈ ಮಸೂದೆಗಳನ್ನು ಒಪ್ಪುತ್ತಿಲ್ಲ. ಇವರಿಗೆ ಕೃಷಿ ಕ್ಷೇತ್ರದ ಅಭಿವೃದ್ಧಿ ಹಿಡಿಸುವುದಿಲ್ಲ. ಸುಮ್ಮನೆ ಅಪಪ್ರಚಾರ ಮಾಡುತ್ತಿದ್ದಾರೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ರೈತರ ಬೆಳೆಯನ್ನು ಖರೀದಿ ಮಾಡುವುದಿಲ್ಲ ಎಂದು ಸುಳ್ಳು ಸುದ್ದಿಯನ್ನು ಹರಡಿಸಿದ್ದಾರೆ ಎಂದು ರಾಘವೇಂದ್ರ ಆರೋಪಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಪ್ರಮುಖರಾದ ಎಸ್.ಎಸ್.ಜ್ಯೋತಿಪ್ರಕಾಶ್, ಗಿರೀಶ್ ಪಟೇಲ್, ಡಿ.ಎಸ್.ಅರುಣ್, ಸಾಲೇಕೊಪ್ಪ ರಾಮಚಂದ್ರ, ರಾಮು ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 8, 2020

Leave a Comment