‘ಹಗಲು ಕನಸು ಕಾಣುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಕನಸಾಗಿಯೇ ಉಳಿಯಲಿದೆ’

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 10 ಮಾರ್ಚ್ 2022

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಕನಸಾಗಿಯೇ ಉಳಿಯಲಿದೆ ಅನ್ನುವುದನ್ನ ಪಂಚ ರಾಜ್ಯ ಚುನಾವಣೆ ಫಲಿತಾಂಶ ಸಾಬೀತುಪಡಿಸಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟಿದ್ದಾರೆ.

Shimoga Nanjappa Hospital

ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಿಗೆ ಸಂಸದ ರಾಘವೇಂದ್ರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಬಿಜೆಪಿಯ ಗೆಲುವಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ, BJP ನಾಯಕರು, ಕಾರ್ಯಕರ್ತರು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ದೇಶದ ಮೂಲೆ ಮೂಲೆಯಲ್ಲೂ ಛಾಪು

ಬಿಜೆಪಿ ಪಕ್ಷವು ದೇಶದ ಮೂಲೆ ಮೂಲೆಯಲ್ಲೂ ಛಾಪು ಮೂಡಿಸಿದೆ. ಕಾಂಗ್ರೆಸ್ ಪಕ್ಷ ಸೇರಿದಂತೆ ಹಲವು ಪಕ್ಷಗಳು ಅಸ್ತಿತ್ವ ಉಳಿಸಿಕೊಳ್ಳಲು ಸಾದ್ಯವಾಗುತ್ತಿಲ್ಲ. ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ತನ್ನ ಅಸ್ತಿತ್ವ ಕಳೆದುಕೊಂಡಿದೆ ಎಂದಿದ್ದಾರೆ.

ಮೋದಿ ಕಾರ್ಯಕ್ಕೆ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶವನ್ನು ಬಲಿಷ್ಠಗೊಳಿಸಿದೆ. ಅಭಿವೃದ್ಧಿ ಮತ್ತು ಜನಪರ ಕಾರ್ಯಕ್ರಮಕ್ಕೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಉದಾಹರಣೆ ಪಂಚರಾಜ್ಯ ಚುನಾವಣೆ ಫಲಿತಾಂಶ. ಉತ್ತರ ಪ್ರದೇಶ, ಮಣಿಪುರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಲಭಿಸಿದೆ. ಉತ್ತರಖಂಡ, ಗೋವಾದಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಿಗೈಲಿ ವಾಪಾಸ್ ಆಗಬೇಕಾಯ್ತು

ಸರ್ಕಾರ ರಚನೆ ಮಾಡಲು ಗೋವಾಕ್ಕೆ ಡಿ.ಕೆ.ಶಿವಕುಮಾರ್ ಮತ್ತು ಉತ್ತರಖಂಡಕ್ಕೆ ಎಂ.ಬಿ.ಪಾಟೀಲ್ ಅವರು ತೆರಳಿದ್ದರು. ಆದರೆ ಇಬ್ಬರೂ ಬರಿಗೈಲಿ ಹಿಂತಿರುಗಿ ಬರುವಂತಾಗಿದೆ. ಕಾಂಗ್ರೆಸ್ ಪಕ್ಷದವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು ಹಗಲು ಕನಸು ಕಾಣುತ್ತಿದ್ದಾರೆ. ಅದು ಕನಸಾಗಿಯೇ ಉಳಿಯಲಿದೆ ಅನ್ನುವುದಕ್ಕೆ ಪಂಚ ರಾಜ್ಯ ಚುನಾವಣೆ ಫಲಿತಾಂಶವೆ ಸಾಕ್ಷಿಯಾಗಲಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ.  

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment