‘ಪೆಟ್ರೋಲ್‌, ಡಿಸೇಲ್‌ ದರ ಹೆಚ್ಚಳಕ್ಕೆ ರಾಜಕೀಯ ದ್ವೇಷವೆ ಕಾರಣ’, ಶಿವಮೊಗ್ಗದಲ್ಲಿ ನಾಳೆ ತಮಟೆ ಹೋರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 JUNE 2024

SHIMOGA : ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ನಿರೀಕ್ಷೆ ಹುಸಿಯಾಗಿದೆ. ಪೆಟ್ರೋಲ್‌, ಡಿಸೇಲ್‌ ದರ (Petrol) ಹೆಚ್ಚಳ ಮಾಡಿ ರಾಜಕೀಯ ದ್ವೇಷ ತೀರಿಸಿಕೊಳ್ಳಲಾಗುತ್ತಿದೆ. ಇದು ಮಧ್ಯಮ ವರ್ಗ, ರೈತರ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು, ಯಂತ್ರೋಪಕರಣಕ್ಕೆ ಇಂಧನ ಅವಶ್ಯಕ. ಈಗ ಇಂಧನ ದರ ಹೆಚ್ಚಳದಿಂದ ರೈತರಿಗೆ ಹೊರೆಯಾಗಲಿದೆ. ಕರಾವಳಿಯಲ್ಲಿ ಮೀನುಗಾರರಿಗು ಸಮಸ್ಯೆಯಾಗಲಿದೆ. ಡಿಸೇಲ್‌ ದರ ಹೆಚ್ಚಳದ ಪರಿಣಾಮ ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಪರಿಷ್ಕರಿಸಲಿದೆ ಎಂದು ಟೀಕಿಸಿದರು.

ನಿರೀಕ್ಷೆ ಹುಸಿಯಾದ ಬೆನ್ನಿಗೆ ಕಾಂಗ್ರೆಸ್‌ ಪಕ್ಷದವರು ರಾಜ್ಯದ ಜನರ ಕುರಿತು ಹಗುರವಾಗಿ ಮಾತನಾಡುತ್ತಿದ್ದಾರೆ. ಗ್ಯಾರಂಟಿಗಳ ಲಾಭ ಪಡೆದು ಬಿಜೆಪಿಗೆ ಮತ ನೀಡಿದ್ದಾರೆ ಎಂದು ಆರೋಪಿಸುತ್ತಿದ್ದಾರೆ. ಈ ಯೋಜನೆಗಳನ್ನು ತಮ್ಮ ಕೈಯಿಂದ ಕೊಡುತ್ತಿರುವಂತೆ ಕೆಲವು ಕಾಂಗ್ರೆಸ್‌ ನಾಯಕರು ವರ್ತಿಸುತ್ತಿದ್ದಾರೆ. ಕಳೆದ ಒಂದು ವರ್ಷದಿಂದ ಯಾವುದೇ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿಲ್ಲ. ಅಂಗನವಾಡಿಗಳ ಬಾಡಿಗೆ ಪಾವತಿಸಿಲ್ಲ, ಅಲ್ಲಿ ಕೆಲಸ ಮಾಡುವವರಿಗೆ ವೇತನೆ ನೀಡಿಲ್ಲ ಎಂದು ರಾಘವೇಂದ್ರ ಆರೋಪಿಸಿದರು.

ತಮಟೆ ಬಾರಿಸಿ ಪ್ರತಿಭಟನೆ

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್‌ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಜನರು ತಿರಸ್ಕರಿಸಿದ್ದಾರೆ. ಈ ಹಿನ್ನೆಲೆ ಪಟ್ರೋಲ್‌, ಡಿಸೇಲ್‌ ದರ ಹೆಚ್ಚಳ ಮಾಡಲಾಗಿದೆ. ಇದನ್ನು ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ. ಸೋಮವಾರ ಬೆಳಗ್ಗೆ ಶಿವಮೊಗ್ಗದ ಗೋಪಿ ವೃತ್ತದಲ್ಲಿ ತಮಟೆ ಬಾರಿಸಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.

ಇದನ್ನೂ ಓದಿ – ಕರ್ನಾಟಕದಲ್ಲಿ ಪೆಟ್ರೋಲ್‌, ಡಿಸೇಲ್‌ ದರ ಹೆಚ್ಚಳ, ಶಿವಮೊಗ್ಗದಲ್ಲಿ ಎಷ್ಟಾಗಿದೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment