SHIVAMOGGA LIVE NEWS | 9 MAY 2024
SHIMOGA : ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಮತದಾನವಾಗಿದೆ. ತಾವು ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುವುದಾಗಿ ಸಂಸದ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಮತ್ತು ಪ್ರಚಾರದ ಕುರಿತು 3 ಪ್ರಮುಖ ಸಂಗತಿಗಳನ್ನು ಪ್ರಸ್ತಾಪಿಸಿದರು.
ರಾಘವೇಂದ್ರ ಹೇಳಿದ 3 ಪ್ರಮುಖಾಂಶ
ಲೋಕಸಭೆ ಚುನಾವಣೆಯನ್ನು ನಾವು ಸಂಘಟನಾತ್ಮಕವಾಗಿ ಎದುರಿಸಿದ್ದೆವು. ಇದೇ ಮೊದಲ ಬಾರಿಗೆ ಅತ್ಯಧಿಕ ಮತದಾನ ವಾಗಿದೆ. ದೊಡ್ಡ ಅಂತರದಲ್ಲಿ ಗೆಲ್ಲುವ ನಿರೀಕ್ಷೆಯಿದೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಒಗ್ಗೂಡಿ ಚುನಾವಣೆಯಲ್ಲಿ ಕೆಲಸ ಮಾಡಿದರು. ಮೈತ್ರಿ ಪಕ್ಷದಲ್ಲಿ ಯಾವುದೇ ಅಪಸ್ವರವಿರಲಿಲ್ಲ. ಜೆಡಿಎಸ್ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಕೆಲಸ ಮಾಡಿದ್ದು, ನಮ್ಮ ಪಕ್ಷದ ಕಾರ್ಯಕರ್ತರು ಸ್ವಂತ ಕೆಲಸವನ್ನೂ ಮರೆತು ಕಾರ್ಯನಿರ್ವಹಿಸಿದ್ದಾರೆ.
ಚುನಾವಣಾ ಪ್ರಚಾರ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೊದಲ ಸಭೆ ನಡೆಸುವ ಮೂಲಕ ಒಟ್ಟು 75 ಬಹಿರಂಗ ಸಭೆಗಳು ನಡೆದವು. ಪಕ್ಷದ ವಿವಿಧ ಮೋರ್ಚಾಗಳಿಂದ ಒಟ್ಟು 1,560 ಸಭೆಗಳನ್ನು ನಡೆಸಲಾಯಿತು. ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಮಹಾಶಕ್ತಿ ಕೇಂದ್ರದಲ್ಲಿ 220 ಸಭೆ ನಡೆಸಲಾಗಿತ್ತು. ಖುದ್ದು ನಾನು 396 ಸಭೆಗಳಲ್ಲಿ ಭಾಗವಹಿಸಿದ್ದೆ. ರಾಜ್ಯಮಟ್ಟದ ನಾಯಕರು 21 ಸಭೆಗಳಲ್ಲಿ ಭಾಗವಹಿಸಿದ್ದರು.
ನಮ್ಮ ಮತದಾರರು ಹೃದಯ ವೈಶಾಲ್ಯ ಉಳ್ಳವರು. ಅವರು ಬಿಜೆಪಿ ಹಾಗೂ ನನ್ನ ಬಗ್ಗೆ ಎಷ್ಟು ಪ್ರೀತಿ ಹೊಂದಿದ್ದಾರೋ ಅಷ್ಟು ಪ್ರಮಾಣದಲ್ಲಿ ನನ್ನ ಗೆಲುವಿನ ಅಂತರ ಹೆಚ್ಚಲಿದೆ. ಪ್ರಧಾನಿ ಮೋದಿ ನಮ್ಮ ನಾಯಕ. ಅವರ ಹೆಸರಿನಲ್ಲಿ, ನಾನು ಮಾಡಿದ ಅಭಿವೃದ್ಧಿ ಕಾರ್ಯಗಳ ಮೇಲೆ ಮತ ಯಾಚಿಸಿದ್ದೆ.
ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಾಜಿ ಸಚಿವ ಕುಮಾರ್ ಬಂಗಾರಪ್ಪ, ಮಾಜಿ ಎಂಎಲ್‌ಸಿ ಎಂ.ಬಿ.ಭಾನುಪ್ರಕಾಶ್, ಮಾಜಿ ಶಾಸಕ ಕೆ.ಬಿ.ಅಶೋಕ ನಾಯ್, ಪ್ರಮುಖರಾದ ಎಸ್.ದತ್ತಾತ್ರಿ, ಹರಿಕೃಷ್ಣ ಸೇರಿ ಇತರರಿದ್ದರು.
ಇದನ್ನೂ ಓದಿ – ಕೋರ್ಟ್ ಮೊರೆ ಹೋದ ಈಶ್ವರಪ್ಪ, ಜಯನಗರ ಠಾಣೆಯಲ್ಲಿ ದಾಖಲಾಯ್ತು ಪ್ರಕರಣ, ಏನಿದು ಕೇಸ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200