ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 24 JUNE 2024
NATIONAL NEWS : 18ನೇ ಲೋಕಸಭೆಯ ಮೊದಲ ಸಂಸತ್ ಅಧಿವೇಶನ ಇವತ್ತಿನಿಂದ ಆರಂಭವಾಗಿದೆ. ನೂತನ ಲೋಕಸಭೆ ಸದಸ್ಯರು ಇವತ್ತು ಪ್ರಮಾಣ ವಚನ (Oath) ಸ್ವೀಕರಿಸಿದರು. ಮೊದಲ ದಿನವೇ ಶಿವಮೊಗ್ಗ ಲೋಕಸಭೆ ಸದಸ್ಯ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು.
ಸಂಸದ ಬಿ.ವೈ.ರಾಘವೇಂದ್ರ ಅವರು ಕನ್ನಡದಲ್ಲಿ ಪ್ರತಿಜ್ಞೆ ಸ್ವಿಕರಿಸಿದರು. ಶಿವಮೊಗ್ಗ ಲೋಕಸಭೆ ಕ್ಷೇತ್ರದ ‘ಮತದಾರ ದೇವರುಗಳʼ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಹಂಗಾಮಿ ಸ್ಪೀಕರ್ ಭತೃಹರಿ ಮೆಹ್ತಾಬ್ ಅವರಿಗೆ ಧನ್ಯವಾದ ತಿಳಿಸಿದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಪ್ರಮಾಣ ವಚನ ಸ್ವೀಕರಿಸಿದರು
ಅಧಿವೇಶನ ಆರಂಭಕ್ಕೂ ಮೊದಲು ಬಿಜೆಪಿ ಸಂಸದ ಭತೃಹರಿ ಮೆಹ್ತಾಬ್ ಅವರಿಗೆ ಹಂಗಾಮಿ ಸ್ಪೀಕರ್ ಆಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ಆ ಬಳಿಕ ಅಧಿವೇಶನದಲ್ಲಿ ಲೋಕಸಭೆ ಸದ್ಯಸರು ಪ್ರಮಾಣ ವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಕ್ಯಾಬಿನೆಟ್ ಸಚಿವರು, ಸಂಸದರು ಪ್ರತಿಜ್ಞೆ ಸ್ವೀಕರಿಸಿದರು.
ಇದನ್ನೂ ಓದಿ – ಕಾರು ಡಿಕ್ಕಿಯಾಗಿ ಮುರಿದು ಬಿದ್ದ ವಿದ್ಯುತ್ ಕಂಬ, CCTVಯಲ್ಲಿ ಸೆರೆಯಾಯ್ತು ಅಪಘಾತದ ದೃಶ್ಯ






