ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | 23 ಮಾರ್ಚ್ 2019
ಪಾದಯಾತ್ರೆ ಮಾಡಿದಾಕ್ಷಣ ಜವಾಬ್ದಾರಿ ಮುಗಿಯುವುದಿಲ್ಲ. ಪಟ್ಟು ಹಿಡಿದು ಕೆಲಸ ಮಾಡಿಸಬೇಕು ಅಂತಾ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ ಶಿವಮೊಗ್ಗ ಲೋಕಸಭೆ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಟೀಕಿಸಿದ್ದಾರೆ.
ಶಿವಮೊಗ್ಗ ಪ್ರೆಸ್‌ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ರಾಘವೇಂದ್ರ, ಅಭ್ಯರ್ಥಿಯಾದ ಬಳಿಕ ಕುಂತಲ್ಲಿ, ನಿಂತಲ್ಲಿ ನೀರಾವರಿ ಯೋಜನೆಗೆ ಹಣ ತಂದೆ ಎಂದು ಪ್ರಚಾರ ಮಾಡಿಕೊಳ್ಳುತ್ತಿದ್ದಾರೆ. ಪಾದಯಾತ್ರೆ ಮಾಡಿ ಸುಮ್ಮನೆ ಕುಳಿತರೆ ಸಾಲದು ಅಂದರು.
ಸರ್ಕಾರದ ಪತ್ರದಲ್ಲೇ ನಮ್ಮನ್ನು ಹೊಗಳಿದ್ದಾರೆ
ಜಿಲ್ಲೆಯ ಏತ ನೀರಾವರಿ ಯೋಜನೆ ಕುರಿತು ಕೇಂದ್ರದ ನೀರಾವರಿ ಸಚಿವೆ ಉಮಾ ಭಾರತಿ ಅವರಿಗೆ ಮನವಿ ಸಲ್ಲಿಸಿದ್ದೆವು. ಕೇಂದ್ರದ ತಂಡವೊಂದು ಶಿವಮೊಗ್ಗಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿತ್ತು. ಇದೇ ವಿಚಾರ ಸಂಬಂಧ ಸಿದ್ದರಾಮಯ್ಯ ಅವರ ಸರ್ಕಾರವನ್ನು ಎಚ್ಚರಿಸುವ ಪ್ರಯತ್ನವನ್ನೂ ಮಾಡಿದೆವು. ಆದರೆ ಅವರ ಸರ್ಕಾರ ಕುಂಭಕರ್ಣ ನಿದ್ರೆಯಿಂದ ಏಳಲಿಲ್ಲ. ನಂತರ ಬೃಹತ್ ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೆವು ಎಂದರು.
ಸರ್ಕಾರದ ಪತ್ರದಲ್ಲಿ ಶಿವಮೊಗ್ಗದ ಸಂಸದರು, ಶಿಕಾರಿಪುರದ ಶಾಸಕರು ಮನವಿ ಮೇರೆಗೆ ಎಂದು ಪ್ರಸ್ತಾಪಿಸಲಾಗಿದೆ ಅಂತಾ ರಾಘವೇಂದ್ರ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ಈ ಮೇಲ್ | shivamoggalive@gmail.com
LATEST NEWS
- ಭದ್ರಾವತಿಯ ತರೀಕೆರೆ ರಸ್ತೆಯಲ್ಲಿ ಅಗ್ನಿ ಅವಘಡ, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಆಹುತಿ

- ಕಲ್ಲು ಬಂಡೆ ಬಿದ್ದು ಕೃಷಿಕ ಸ್ಥಳದಲ್ಲೇ ಸಾವು

- ಹೆಗಲತ್ತಿಯಲ್ಲಿ ನಾಗಯಕ್ಷೆ ದೇವಾಲಯದ 12ನೇ ವಾರ್ಷಿಕೋತ್ಸವ, ಇವತ್ತು ಪಲ್ಲಕ್ಕಿ ಉತ್ಸವ

- ಶಿವಮೊಗ್ಗ ಜಿಲ್ಲೆಯಲ್ಲಿ ರಣ ಬಿಸಿಲು, ತಾಪಮಾನ ಹೆಚ್ಚಳ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ಉಷ್ಣಾಂಶ?

- ತುಂಗಾ ಚಾನಲ್ ಬಳಿ ಸ್ಕೂಟಿ ನಿಲ್ಲಿಸಿಕೊಂಡಿದ್ದವರ ಮೇಲೆ ಪೊಲೀಸ್ ದಾಳಿ, ಒಬ್ಬ ಎಸ್ಕೇಪ್, ಮತ್ತೊಬ್ಬ ಅರೆಸ್ಟ್

About The Editor
ನಿತಿನ್ ಆರ್.ಕೈದೊಟ್ಲು





