SHIVAMOGGA LIVE NEWS | 17 MARCH 2024
SHIMOGA : ಜಿಲ್ಲಾ ಜೆಡಿಎಸ್ ಕಚೇರಿಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ನೀಡಿದ್ದರು. ನೆಹರೂ ರಸ್ತೆಯಲ್ಲಿರುವ ಕಚೇರಿಯಲ್ಲಿ ಜೆಡಿಎಸ್ ಕಾರ್ಯಕರ್ತರ ಜೊತೆಗೆ ರಾಘವೇಂದ್ರ ಸಭೆ ನಡೆಸಿದರು. ಈ ಸಂದರ್ಭ ಸಂಸದರಿಗೆ ಜೆಡಿಎಸ್ ಕಾರ್ಯಕರ್ತೆಯರು ಆರತಿ ಬೆಳಗಿ ಸ್ವಾಗತಿಸಿದರು.
ಸಭೆಯಲ್ಲಿ ರಾಘವೇಂದ್ರ ಹೇಳಿದ್ದೇನು?
ತುರ್ತು ಪರಿಸ್ಥಿತಿ ವಿರೋಧಿಸಿ ಜನಸಂಘ ಮತ್ತು ಜನತಾ ಪರಿವಾರ ಒಟ್ಟಾಗಿ ಹೋರಾಟ ಮಾಡಿದ್ದು ಇತಿಹಾಸ. ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಒಂದಾಗಿ ಕೆಲಸ ಮಾಡಬೇಕಿದೆ. ಪ್ರಚಾರ ನಡೆಸಬೇಕಾಗಿದೆ. ಜೆಡಿಎಸ್ ಕಾರ್ಯಕರ್ತರನ್ನು ನಮ್ಮ ಪಕ್ಷ ಅತ್ಯಂತ ಗೌರವದಿಂದ ನಡೆಸಿಕೊಳ್ಳಲಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ರೈತ ಪರ ಕಾಳಜಿಯನ್ನು ಬಿಜೆಪಿಯು ಅಳವಡಿಸಿಕೊಂಡಿದೆ ಎಂದು ಬಿ.ವೈ.ರಾಘವೇಂದ್ರ ಹೇಳಿದರು.
ರಾಜಕೀಯ ಪಕ್ಷಗಳ ಮಧ್ಯೆ ಮೈತ್ರಿ ಏರ್ಪಟ್ಟಾಗ ಸಣ್ಣಪುಟ್ಟ ಗೊಂದಲ ಸಹಜ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸುವ ಫ್ಲೆಕ್ಸ್ಗಳಲ್ಲಿ ಜೆಡಿಎಸ್ ಮುಖಂಡರ ಫೋಟೊಗಳಿಲ್ಲ ಎಂದು ಗೊಂದಲ ನಿರ್ಮಾಣವಾಗಿತ್ತು. ಇಂತಹ ಸಣ್ಣಪುಟ್ಟ ಗೊಂದಲಗಳ ನಿವಾರಣೆ ಸಂಯೋಜಕರನ್ನು ನಿಯೋಜಿಸಬೇಕು.ಶಾರದಾ ಪೂರ್ಯಾನಾಯ್ಕ್, ಶಾಸಕಿ
ಮಾಜಿ ಸಚಿವ ಆರಗ ಜ್ಞಾನೇಂದ್ರ, ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಲೋಕಸಭೆ ಚುನಾವಣೆ ಜಿಲ್ಲಾ ಉಸ್ತುವಾರಿ ರಘುಪತಿ ಭಟ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್, ನಗರಾಧ್ಯಕ್ಷ ದೀಪಕ್ ಸಿಂಗ್, ಸೋಮಿನಕೊಪ್ಪ ಕಾಂತರಾಜ್, ಕರುಣಾಮೂರ್ತಿ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ನಾಳೆ ಪ್ರಧಾನಿ ಭೇಟಿ, ಇವತ್ತೆ ವಿವಿಧ ಗ್ರಾಮ, ಬಡಾವಣೆಗಳ ರಸ್ತೆ ಬಂದ್, ಸಂಕಷ್ಟದಲ್ಲಿ ಜನ, ಪೊಲೀಸರ ಜೊತೆ ವಾಗ್ವಾದ
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200