ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 NOVEMBER 2023
SHIMOGA : ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.
ವಿಜಯೇಂದ್ರ ಅವರು ಬೆಳಗ್ಗೆ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದರು. ಈ ಸಂದರ್ಭ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಚಂಡೆ ತಂಡ ಇತ್ತು. ನೂತನ ರಾಜ್ಯಾಧ್ಯಕ್ಷರು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ಕಾರ್ಯಕರ್ತರು ಘೋಷಣೆ ಕೂಗಿದರು. ಆರತಿ ಬೆಳಗಿ ಬಿಜೆಪಿ ಕಚೇರಿಯೊಳಗೆ ವಿಜಯೇಂದ್ರ ಅವರನ್ನು ಸ್ವಾಗತಿಸಲಾಯಿತು.
ಮೋದಿ ಮತ್ತೆ ಪ್ರಧಾನಿಯಾಗಲು ಶ್ರಮಿಸೋಣ
ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ವಿಜಯೇಂದ್ರ, ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಟ್ಟಾಗಿ ಇರೋಣ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ಶ್ರಮಿಸೋಣ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಅಭ್ಯರ್ಥಿಗಳು ಗೆಲ್ಲಬೇಕು ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿಜಯೇಂದ್ರ ಸ್ವಾಗತಕ್ಕೆ ಸಿದ್ಧತೆ, ಸಾವಿರ ಸಾವಿರ ಬೈಕ್ಗಳ ಜೊತೆ ಮೆರವಣಿಗೆ, ಎಲ್ಲೆಲ್ಲಿ ಸಾಗುತ್ತೆ ಜಾಥಾ?
ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಪ್ರಮುಖರಾದ ಗಿರೀಶ್ ಪಟೇಲ್ ಸೇರಿದಂತೆ ಹಲವರು ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422